ನವದೆಹಲಿ : ರಾಜ್ಯ ವಿಧಾನಮಂಡಲದ ಅಧಿವೇಶನ ಆರಂಭಕ್ಕೆ ಮುನ್ನವೇ ಬಿಜೆಪಿಯಿಂದ ವಿಧಾನಸಭೆ ಹಾಗೂ ಪರಿಷತ್ ವಿಪಕ್ಷ ನಾಯಕನ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಇದಕ್ಕಾಗಿ ಇಂದು ಬಿಜೆಪಿ ಮಧ್ಯಾಹ್ನ ಬಳಿಕ ಶಾಸಕಾಂಗ ಪಕ್ಷದ ಸಭೆ ಕೂಡ ಕರೆಯಲಾಗುತ್ತದೆ ಎನ್ನಲಾಗಿತ್ತು. ಆದರೆ ಈಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾತ್ರ, ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಲಾಗಿದೆ ಎಂದಿದ್ದಾರೆ.
ಈ ವಿಷಯ ಕುರಿತು ದೆಹಲಿಗೆ ಬಿಜೆಪಿ ಹೈಕಮಾಂಡ್ ಜೊತೆಗೆ ಚರ್ಚಿಸುವುದಕ್ಕೆ ತೆರಳಿದ್ದರು. ನಿನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಕೇವಲ 8 ನಿಮಷಗಳ ಕಾಲ ಚರ್ಚಿಸಿದ್ದರು ಎನ್ನಲಾಗಿದೆ. ಆ ಬಳಿಕ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಎಸ್ ಯಡಿಯೂರಪ್ಪ ವಿಪಕ್ಷ ನಾಯಕನ ಆಯ್ಕೆ ನಾಳೆಗೆ ಮುಂದೂಡಿಕೆಯಾಗಿದೆ ಎಂದು ತಿಳಿಸಿದ್ದಾರೆ.