ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಮುಂಗಾರು ಮಳೆ ಅಬ್ಬರ ಜೋರಾಗಿದ್ದು. ಮುಂದಿನ ಜುಲೈ.19ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದು ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಣೆ ಮಾಡಲಾಗಿದೆ.
ಈ ಕುರಿತು ಹವಾಮಾನ ಇಲಾಖೆಯಿಂದ ಮಾಹಿತಿ ಬಂದಿದ್ದು, ‘ದಾವಣಗೆರೆ, ಕೊಡಗು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳಲ್ಲಿ ಇದೇ ಜುಲೈ.19ರವರೆಗೆ ಭಾರೀ ಮಳೆಯಾಗಲಿದೆ. ಈ ಜಿಲ್ಲೆಯಲ್ಲಿ
ಈಗಾಗಲೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ರಾಜ್ಯದ ಇನ್ನೂ ಬೀದರ್, ಗದಗ, ರಾಯಚೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ಬೆಂಗಳೂರು ನಗರ, ಚಿತ್ರದುರ್ಗ, ಹಾಸನ, ಮೈಸೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರಿನಲ್ಲಿಯೂ ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಟ್ಟಾರೆಯಾಗಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜುಲೈ.19ರವರೆಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.