ಇಂದು ಬೆಳಗ್ಗೆ 11.30 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

You are currently viewing ಇಂದು ಬೆಳಗ್ಗೆ 11.30 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ: ಇಂದಿನಿಂದಲೇ ನೀತಿ ಸಂಹಿತೆ ಜಾರಿ

ವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ಇವತ್ತೇ ದಿನಾಂಕ ಘೋಷಣೆ ಮಾಡುವ ಸಾಧ್ಯತೆ ಇದೆ. ಇಂದು ಬೆಳಿಗ್ಗೆ 11:30 ಕ್ಕೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ಕರೆದಿದೆ.

ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದ್ದು, ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್ ಕುಮಾರ್ ದಿನಾಂಕ ಘೋಷಣೆ ಮಾಡಲಿದ್ದಾರೆ.

 

ಈಗಾಗಲೇ ರಾಜ್ಯದಲ್ಲಿ ಚುನಾವಣಾ ಸಿದ್ದತೆಯ ಪರಿಶೀಲನೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ ಮಾಡಿಕೊಂಡಿತ್ತು.

ಇಂದು ಚುನಾವಣೆ ಘೋಷಣೆಯಾದ ಕ್ಷಣದಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿ ಆಗಲಿದೆ. ಇಂದು ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿರುವ ಚುನಾವಣಾ ಆಯುಕ್ತರು ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ಮತದಾನದ ದಿನಾಂಕ, ಹಾಗೂ ಫಲಿತಾಂಶದ ದಿನಾಂಕ ಪ್ರಕಟಿಸಲಿದ್ದಾರೆ.

ರಾಜ್ಯದಲ್ಲಿ ಎಷ್ಟು ಮತದಾರರಿದ್ದಾರೆ? ಚುನಾವಣಾ ವ್ಯವಸ್ಥೆ ಹೇಗಿರುತ್ತದೆ? ಎಷ್ಟು ಹಂತದಲ್ಲಿ ಮತದಾನ ನಡೆಯಲಿದೆ ಎಂಬುದರ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ.

ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಸುವ ಸಂಬಂಧ ದೆಹಲಿಯ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಬೆಳಿಗ್ಗೆ 11:30ಕ್ಕೆ ಪತ್ರಿಕಾಗೋಷ್ಠಿ ಕರೆಯಲಾಗಿದೆ.

ಇಂದಿನಿಂದ 45 ದಿನಗಳ ಒಳಗೆ ಮತದಾನ ನಡೆಯಬೇಕಿದ್ದು, ಬಹುತೇಕ ಮೇ ಮೊದಲ ವಾರ ಮತದಾನದ ದಿನಾಂಕ ನಿಗದಿಯಾಗಿರುವ ಸಾಧ್ಯತೆ ಇದೆ.

Leave a Reply

error: Content is protected !!