ಆಂಧ್ರ ಪ್ರದೇಶ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation-ISRO) ತನ್ನ ಇತಿಹಾಸದಲ್ಲಿ ಹೊಸದೊಂದು ಮೈಲಿಗಲ್ಲು ಸಾಧಿಸಿದೆ. ಚಂದ್ರಯಾನ 3 ಉಡಾವಣೆ ಯಶಸ್ವಿಯಾಗಿದ್ದು, ಮೂಲಕ ನಭೋ ಮಂಡಲರದಲ್ಲಿ ಭಾರತದ ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ.
ಆಂಧ್ರದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ರಾಜ್ಯ ಸಚಿವ ಈ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ್ದು, “ಇದು ನಮಗೆ ಹೆಮ್ಮೆ ಪಡುವ ಕ್ಷಣ, ಭಾರತಕ್ಕೆ ಕೀರ್ತಿ ತಂದ ಕ್ಷಣವಾಗಿದೆ. ಇಸ್ರೋ ತಂಡಕ್ಕೆ ನಾನು ಧನ್ಯವಾದ ಹೇಳಲೇಬೇಕು. ಭಾರತವು ಹೆಮ್ಮೆ ಪಡುತ್ತದೆ. ಶ್ರೀಹರಿಕೋಟಾದ ಬಾಗಿಲುಗಳನ್ನು ಅನ್ಲಾಕ್ ಮಾಡುವ ಮೂಲಕ ಮತ್ತು ಭಾರತದ ಬಾಹ್ಯಾಕಾಶ ಕ್ಷೇತ್ರವನ್ನು ಸಕ್ರಿಯಗೊಳಿಸುವ ಮೂಲಕ ಇದನ್ನು ಸಾಧ್ಯವಾಗಿಸಿದ ಪ್ರಧಾನಿ ಮೋದಿಯವರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ಹೇಳಿದರು.