ಕೊಪ್ಪಳ : ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆ ನಾಳೆ (ಜುಲೈ 15) ಕೊಪ್ಪಳ, ಮುನಿರಾಬಾದ್ ಹಾಗೂ ಕುಕನೂರಿನಲ್ಲಿ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ವಿದ್ಯುತ್‌ಗೆ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸುವ ಉದ್ದೇಶದಿಂದ ಮೇಲಾಧಿಕಾರಿಗಳ ನಿರ್ದೇಶನದನ್ವಯ ಹಾಗೂ ಸ್ಟ್ಯಾಂಡರ್ಡ್ ಆಫ್ ಪರ್ಫಾಮೇನ್ಸ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಅಧೀಕ್ಷಕ ಅಭಿಯಂತರರು, ಕಾರ್ಯನಿರ್ವಾಹಕ ಅಬಿಯಂತರರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿರುತ್ತದೆ.
ಕೊಪ್ಪಳ ಜೆಸ್ಕಾಂ ವಿಭಾಗದ ವ್ಯಾಪ್ತಿಯ ಕೊಪ್ಪಳ ಉಪ ವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆಯು ಕೊಪ್ಪಳ ಜೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಹಾಗೂ ಯಲಬುರ್ಗಾ ಉಪ ವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಕುಕನೂರು ಕಚೇರಿಯಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ಮತ್ತು ಮುನಿರಾಬಾದ್ ಉಪ ವಿಭಾಗದ ಸಭೆಯನ್ನು ಮಧ್ಯಹ್ನ 3 ಗಂಟೆಗೆ ಮುನಿರಾಬಾದ್ ಕಚೇರಿಯಲ್ಲಿ ನಡೆಯಲಿದೆ.
ಆಯಾ ಉಪವಿಭಾಗ ವ್ಯಾಪ್ತಿಯ ಎಲ್ಲಾ ವಿದ್ಯುತ್ ಗ್ರಾಹಕರು ಸಭೆಗೆ ಹಾಜರಾಗಿ, ಯಶಸ್ವಿಗೊಳಿಸಬೇಕು ಎಂದು ಗುವಿಸಕಂನಿ ಕಾರ್ಯ ಮತ್ತು ಪಾಲನಾ ವಿಭಾಗ ಕೊಪ್ಪಳ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.