ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಾಗ್ಧಾಳಿ ಮುಂದುವರೆಸಿದ್ದಾರೆ. ಕೇವಲ 2 ತಿಂಗಳಲ್ಲೇ ವರ್ಗಾವಣೆ ದಂಧೆಯ ಮೂಲಕ ಬರೋಬ್ಬರಿ 500 ಕೋಟಿಗೂ ಹೆಚ್ಚು ವಹಿವಾಟು ನಡೆಸಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಒಬ್ಬ ಅಧಿಕಾರಿ ನನಗೆ ರಾಜ್ಯ ಸರ್ಕಾರದ ವರ್ಗಾವಣೆ ದಂಧೆ ಬಗ್ಗೆ ಮಾಹಿತಿ ನೀಡಿದ್ದಾರೆ. ಆಡಳಿತ ಪಕ್ಷದಿಂದ ವರ್ಗಾವಣೆ ದಂಧೆಯನ್ನೇ ನಡೆಸಲಾಗಿದೆ. ಕೇವಲ 2 ತಿಂಗಳಿನಲ್ಲೇ ಬರೋಬ್ಬರಿ 500 ಕೋಟಿಗೂ ಹೆಚ್ಚು ವಹಿವಾಟು ನಡೆದಿದೆ ಎಂದು ಗಂಭೀರ ಆರೋಪಿಸಿದ್ದಾರೆ.
ಕಪ್ಪ ಕಾಣಿಗೆ ಹೇಗೆ ನಡೆಯುತ್ತಿದೆ ಎಲ್ಲವೂ ಗೊತ್ತು. ಈ ಸರ್ಕಾರದಲ್ಲಿ ಟ್ರಾನ್ಸ್ ಫಾರ್ಂನಲ್ಲಿ ದಂಧೆಯೇ ನಡೆಯುತ್ತಿದೆ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಕಳೆದ 2008 ರಿಂದ 2013ರಲ್ಲಿ ಅಕ್ರಮವಾಗಿ ಕಾಮಗಾರಿಗಳು ನಡೆದಿವೆ. ಮಾಗಡಿ ಕ್ಷೇತ್ರದಲ್ಲಿ ಬರೋಬ್ಬರಿ 600 ಕೋಟಿ ವೆಚ್ಚದ ಕಾಮಗಾರಿ ನಡೆದಿದೆ. ಈ ಮಟ್ಟಕ್ಕೆ ಭ್ರಷ್ಟಾಚಾರ ಆದ್ರೇ, ರಾಜ್ಯ ಉಳಿಯುತ್ತಾ ಎಂದು ಪ್ರಶ್ನೆ ಮಾಡಿದರು.