ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಇಂದು ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ನಮ್ಮ ತಂದೆಯವರು ನಿಧನರಾಗಿದ್ದಾರೆ ಎಂದು ಚಾಂಡಿ ಅವರ ಪುತ್ರ ಫೇಸ್ ಬುಕ್ ಪೋಸ್ಟ್ ನಲ್ಲಿ ಈ ವಿಚಾರವನ್ನು ತಿಳಿಸಿದ್ದಾರೆ. ಸಾವಿನ ಕಾರಣದ ಬಗ್ಗೆ ಕುಟುಂಬವು ಹೆಚ್ಚಿನ ವಿವರಗಳನ್ನು ನೀಡಿಲ್ಲ ಎಂದು ಮಾಹಿತಿ ಇದೆ.
ಬಹು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 79 ವರ್ಷದ ನಾಯಕ ಬೆಂಗಳೂರಿನ ಆರೋಗ್ಯ ಕೇಂದ್ರದಲ್ಲಿ ದೀರ್ಘಕಾಲದಿಂದ ಚಿಕಿತ್ಸೆ ಪಡೆಯುತ್ತಿದ್ದರು.