BREAKING : “ಗೃಹ ಲಕ್ಷ್ಮಿ ಯೋಜನೆ” : ನಿಮ್ಮ ಖಾತೆಗೆ 2,000 ರೂ. ಬಂದಿಲ್ವಾ..? ಹಾಗಾದರೆ, 8147500500 ನಂಬರ್‌ಗೆ SMS ಅಥವಾ ಕಾಲ್‌ ಮಾಡಿ ಮಾಹಿತಿ ತಿಳಿದುಕೊಳ್ಳಿ…!

You are currently viewing BREAKING : “ಗೃಹ ಲಕ್ಷ್ಮಿ ಯೋಜನೆ” : ನಿಮ್ಮ ಖಾತೆಗೆ 2,000 ರೂ. ಬಂದಿಲ್ವಾ..? ಹಾಗಾದರೆ, 8147500500 ನಂಬರ್‌ಗೆ SMS ಅಥವಾ ಕಾಲ್‌ ಮಾಡಿ ಮಾಹಿತಿ ತಿಳಿದುಕೊಳ್ಳಿ…!

ಬೆಂಗಳೂರು : ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವದ ಯೋಜನೆಯಾದ ಕುಟುಂಬದಲ್ಲಿನ ಒಬ್ಬ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ನೀಡುವ “ಗೃಹ ಲಕ್ಷ್ಮಿ ಯೋಜನೆ”ಯನ್ನು ಅನುಷ್ಠಾನಗೊಳಿಸಲು ಇದೀಗ ಮಾರ್ಗಸೂಚಿಯನ್ನು ಹೊರಡಿಸಲಾಗಿದ್ದು, ಈ ಮಾರ್ಗಸೂಚಿಯ ಕ್ರಮಗಳನ್ನು
ತಪ್ಪದೇ ಪಾಲನೆ ಮಾಡುವಂತೆ ಸೂಚಿಸಲಾಗಿದೆ. ಅದು ಅಲ್ಲದೇ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ 2,000 ರೂಪಾಯಿಗಳು ಜಮಾ ಆಗದೇ ಇದ್ದರೇ, ಏನು ಮಾಡಬೇಕು ಎನ್ನುವ ಬಗ್ಗೆಯೂ ಸರ್ಕಾರ ಮಾಹಿತಿಯನ್ನು ನೀಡದೆ.

ಇಂದು ಈ ಬಗ್ಗೆ ಅಧಿಕೃತವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಧೀನ ಕಾರ್ಯದರ್ಶಿ ಈ ನಡವಳಿಯನ್ನು ಹೊರಡಿಸಿದ್ದಾರೆ.

ಕಳೆದ ಮೇ 20ರ ಆದೇಶದಲ್ಲಿ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡವು “ಗೃಹ ಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲು ತಾತ್ವಿಕವಾಗಿ ಅನುಮೋದನೆ ನೀಡಿ ಆದೇಶಿಸಲಾಗಿತ್ತು.

ಕಳೆದ ಜೂನ್‌ 06ರ ಆದೇಶದಲ್ಲಿ ರಾಜ್ಯದ ಕುಟುಂಬದಲ್ಲಿ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡವು ಗೃಹಲಕ್ಷ್ಮಿ ನಾಳೆ ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಗೃಹ ಲಕ್ಷ್ಮೀ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.

*ಗೃಹಲಕ್ಷ್ಮಿ ಯೋಜನೆಯ ಉದ್ದೇಶ*

ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಅನೇಕ ಯೋಜನೆಗಳನ್ನು ಹಮ್ಮಿಕೊಂಡಿರುತ್ತದೆ. ಅದರಂತೆ ಕುಟುಂಬದ ನಿರ್ವಹಣೆಯಲ್ಲಿ ಕುಟುಂಬದ ಯಜಮಾನಿಯ ಪಾತ್ರ ಪುಮುಖವಾಗಿದ್ದು, ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ನಿರ್ವಹಣೆಯು ಉತ್ತಮ ಗುಣಮಟ್ಟದಲ್ಲಿರುತ್ತದೆ. ಆದ್ದರಿಂದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2,000 ರೂ.ಗಳನ್ನು ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು 2023-24ನೇ ಸಾಲಿನಿಂದ ಜಾರಿಗೆ ತರಲಾಗಿದೆ.

*ಯೋಜನೆಯ ವ್ಯಾಪ್ತಿ ಹೀಗಿದೆ*

ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಮಾತ್ರ ಅನ್ವಯವಾಗುತ್ತದೆ.

ಯಾವೆಲ್ಲಾ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸಬೇಕು?

*ಗೃಹಲಕ್ಷ್ಮಿ ಯೋಜನೆಯ ಮಾರ್ಗಸೂಚಿಗಳು ಹೀಗಿವೆ.

*ಯೋಜನೆಯ ಸೌಲಭ್ಯ ಪಡೆಯಲು ಪ್ರಮುಖ ಅರ್ಹತೆಗಳು ಇಂತಿವೆ*

1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ ಎಂದು ಮಾಹಿತಿ ಇದೆ.

2. ಪ್ರತಿ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.

3. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗುವುದಿಲ್ಲ.

*ಯೋಜನೆಯಡಿ ನೋಂದಾಯಿಸಲು ಬೇಕಾದ ಅತೀ ಮುಖ್ಯ ದಾಖಲಾತಿಗಳು*

1. ಪಡಿತರ ಚೀಟಿಯ ಸಂಖ್ಯೆ
2. ಯಜಮಾನಿಯ ಹಾಗೂ ಯಜಮಾನಿ ಪತಿಯ ಆಧಾರ್ ಕಾರ್ಡ್ ಸಂಖ್ಯೆ.
3. ಯಜಮಾನಿಯ ಆಧಾರ್‌ಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆಯ ಪಾಸ್ ಬುಕ್/ ಫಲಾನುಭವಿಯು ಇಚ್ಛಿಸುವ ಪರ್ಯಾಯ ಬ್ಯಾಂಕ್ ಖಾತೆಯ ವಿವರಗಳು

*ನೋಂದಣಿ ವಿಧಾನ ಹೀಗಿದೆ*

1. ಫಲಾನುಭವಿಗಳು “ಗ್ರಾಮ ಒನ್” “ಬೆಂಗಳೂರು ಒನ್” “ಕರ್ನಾಟಕ ಒನ್” ಹಾಗೂ “ಬಾಪೂಜಿ ಸೇವಾ ಕೇಂದ್ರ” ಮೂಲಕ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿ ಕೊಳ್ಳಬಹುದು.

2. ಫಲಾನುಭವಿಗಳು ಮೇಲ್ಕಾಣಿಸಿದ ಕೇಂದ್ರಗಳಲ್ಲದೆ “ಪುಜಾ ಪ್ರತಿನಿಧಿ” ಮೂಲಕ ಸಹ ಸೇವಾಸಿಂಧು ಪೋರ್ಟಲ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.

3. ಪ್ರತಿ ಫಲಾನುಭವಿಯ ನೋಂದಾವಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902ಕ್ಕೆ ಕಾಲ್ ಮಾಡಿ ಅಥವಾ 8147500500 ನಂಬರ್‌ಗೆ SMS ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದಾಗಿದೆ.

4. ನಿಗಧಿತ ವೇಳೆಗೆ ಭೇಟಿ ನೀಡಿ ನೋಂದಾವಣೆ ಮಾಡಿಕೊಳ್ಳಲು ಸಾಧ್ಯವಾಗದೆಯಿದ್ದಲ್ಲಿ, ಅದೇ ಕೇಂದ್ರಕ್ಕೆ ಮುಂದಿನ ಯಾವುದೇ ದಿನಗಳಲ್ಲಿ ಕಛೇರಿ ಸಮಯದ ಬಳಿಕ (ಸಂಜೆ 5.00 ಗಂಟೆ ಬಳಿಕ) ತೆರಳಿ ನೋಂದಾಯಿಸಿಕೊಳ್ಳಬಹುದು.

5. ಅನುಮೋದಿಸಲ್ಪಟ್ಟ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಪತ್ರವನ್ನು ನೀಡಲಾಗುವುದು.

6. ಅರ್ಜಿ ನೋಂದಾಯಿಸಿಲು ಯಾವುದೇ ಶುಲ್ಕವನ್ನು ನೀಡಬೇಕಾಗಿಲ್ಲ.

7. ಯೋಜನೆಯಡಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಯಾವುದೇ ಅಂತಿಮ ದಿನಾಂಕ ಮತ್ತು ಸಮಯ ನಿಗದಿ ಪಡಿಸಿರುವುದಿಲ್ಲ.

Leave a Reply

error: Content is protected !!