ಬೆಂಗಳೂರು : ತುಳುನಾಡಿನ ಜನತೆಗೆ ಸರ್ಕಾರ ಶುಭ ಸುದ್ದಿ ನೀಡಿದೆ. ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಸ್ಥಾನಮಾನ ನೀಡಲು ಸರ್ಕಾರವು ಪೂರಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ನೀಡಿದರು.
ಕಾಂಗ್ರೆಸ್‌ನ ಅಶೋಕ್ ಕುಮಾರ್ ರೈ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವ, “ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಂಬಂಧ ಅಧ್ಯಯನ ನಡೆಸಲು ಹಿಂದಿನ ಸರ್ಕಾರವು ಡಾ.ಎಂ. ಮೋಹನ ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ನೇಮಿಸಿತ್ತು. ಸಮಿತಿಯ ವರದಿ ಬಂದಿದ್ದು, ಕೆಲವು ಇಲಾಖೆಗಳ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಕೈಗೊಳ್ಳುವಂತೆ ಶಿಫಾರಸು ಮಾಡಲಾಗಿದೆ. ಅಗತ್ಯವಿರುವ ಇಲಾಖೆಗಳಿಂದ ಅಭಿಪ್ರಾಯ ಪಡೆದು ನಿರ್ಣಯ ಕೈಗೊಳ್ಳುತ್ತೇವೆ” ಎಂದರು.
ಸ್ವೀಕರ್ ಯು.ಟಿ. ಖಾದರ್ ಕೂಡ ಮಧ್ಯ ಪ್ರವೇಶಿಸಿ, ಬೇಡಿಕೆಯ ಪರ ಮಾತನಾಡಿದರು. ಮೂವರೂ ಕೆಲಕಾಲ ತುಳು ಭಾಷೆಯಲ್ಲ ಮಾತು ಮುಂದುವರಿಸಿದರು.