ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಭಾರೀ ಆಘಾತಯಾಗಿದೆ. ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧದ ಸಿಬಿಐ ಕೇಸ್ ಗೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್
ಇದೇ ಜುಲೈ.28ಕ್ಕೆ ಮುಂದೂಡಿಕೆ ಮಾಡಿದೆ ಎಂದು ಹೇಳಲಾಗಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧದ ಸಿಬಿಐ ದಾಖಲಿಸಿರುವ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆಯನ್ನು ಹೈಕೋರ್ಟ್ ನಡೆಸಿತ್ತು. ಈ ಸಂದರ್ಭದಲ್ಲಿ ಸಿಬಿಐ ತನಿಖೆಯ ವಿಧಾನವೇ ಪ್ರಶ್ನಾರ್ಹವಾಗಿದೆ ಎನ್ನಲಾಗಿದೆ. ಸಿಬಿಐ ಡಿವೈಎಸ್ಪಿಗೆ ತನಿಖೆ ಅಧಿಕಾರ ನೀಡಿರೋದು ಅನುಮಾನಾಸ್ಪದವಾಗಿದೆ ಎಂದು ಡಿಕೆ ಶಿವಕುಮಾರ್ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದಿಸಿದ್ದರು.
ಈ ಅರ್ಜಿಯಲ್ಲಿ ಉಲ್ಲೇಖಿಸದ ವಾದ ಮಂಡನೆಗೆ ಸಿಬಿಐ ಪರ ವಕೀಲರು ಆಕ್ಷೇಪಿಸಿದರು. ಸಿಬಿಐ ಪರವಾಗಿ ಎಸ್ ಪಿಪಿ ಪ್ರಸನ್ನ ಕುಮಾರ್ ಆಕ್ಷೇಪಿಸಿದರು. ಈ ವಾದವನ್ನು ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು ಜುಲೈ.28ಕ್ಕೆ ಮುಂದೂಡಿಕೆ ಮಾಡಿತು.