ಬೆಂಗಳೂರು : ರಾಜ್ಯದಲ್ಲಿ ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದೀಗ ಜನತೆಗೆ ಮತ್ತೊಂದು ಶಾಕ್ ನೀಡಲು ಸರ್ಕಾರ ಮುಂದಾಗಿದೆ. ದಿನ ನಿತ್ಯ ಬಳಿಕೆ ಆಗುವ ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.3 ಹೆಚ್ಚಳ ಮಾಡಲಾಗಿದೆ ಎಂದು ವರದಿಯಾಗುತ್ತಿದೆ.
ಈ ಬಗ್ಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿನ ಎಲ್ಲ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಸಭೆ ನಡೆಸಿ, ಹಾಲು ಒಕ್ಕೂಟಗಳು ನೀಡಿರುವ ನಂದಿನಿ ದರ 5 ರೂ ಹೆಚ್ಚಳ ಪ್ರಸ್ತಾನೆಯ ಬಗ್ಗೆ ಮಹತ್ವದ ಚರ್ಚೆಯನ್ನು ನಡೆಸಿದ್ದಾರೆ ಎನ್ನಲಾಗಿದೆ. ಅದು ಅಲ್ಲದೇ ನಂದಿನಿ ಹಾಲಿನ ಪುಡಿಯ ದರವನ್ನು ಹೆಚ್ಚಳದ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ಹೇಳಲಾಗುತ್ತಿದೆ.
ಅಂತಿಮವಾಗಿ ಇಂದಿನ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ನಂದಿನಿ ಹಾಲಿನ ಪ್ರತಿ ಲೀಟರ್ ದರವನ್ನು ರೂ.3 ಹೆಚ್ಚಳ ಮಾಡುವಂತ ನಿರ್ಧಾರವನ್ನು ಕೈಗೊಂಡಿದ್ದಾರೆ.