ಬಾಲಗಕೋಟೆ : ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವಾಗ ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದು ಮಾಡಿ, ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆ ಬಾಗಲಕೋಟೆಯ ಶೂರ್ಪಾಲಿಯ ಗ್ರಾಮ ಒನ್ ಗ್ರಾಮದಲ್ಲಿ ನಡೆದಿದೆ .
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಹಣ ಕೇಳಿದ್ದಕ್ಕೆ ಸಿದ್ದಪ್ಪ ಎಂಬುವವರನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದರು. ಇದರ ವಿಡಿಯೋ ಭಾರೀ ವೈರಲ್ ಆಗಿತ್ತು, ಈ ಕುರಿತು ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ನಡುವೆ ಸಾರ್ವಜನಿಕರ ದೂರಿನ ಮೇರೆಗೆ ಬಾಗಲಕೋಟೆ ಜಿಲ್ಲಾಡಳಿತವು, ಗ್ರಾಮ ಒನ್ ಸಿಬ್ಬಂದಿ ದಾನಯ್ಯ ಮಠಪತಿ ಎಂಬುವರ ಲಾಗಿನ್ ಐಡಿ ರದ್ದು ಮಾಡಲಾಗಿದೆ ಎಂದು ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.
‘ಗೃಹಲಕ್ಷ್ಮಿ ಯೋಜನೆ’ಗೆ ಕಳೆದ ಗುರುವಾದಿಂದ ನೋಂದಣಿ ಆರಂಭವಾಗಿದ್ದು, ನಿನ್ನೆ ಒಂದೇ ದಿನ ಮಂದಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ನಡುವೆ ಹಲವೆಡೆ ಸರ್ವರ್ ಸಮಸ್ಯೆ ಉಂಟಾಗಿ ಸಾಕಷ್ಟು ಜನ ಪರಡಾಟ ನಡೆಸಿದ್ದು ಕೂಡ ಕಂಡು ಬಂದಿದೆ. ನಿನ್ನೆ (ಶನಿವಾರ) ಒಂದೇ ದಿನ 14,16,462 ಜನರ ಅರ್ಜಿ ಸಲ್ಲಿಸಿದ್ದು, ಇಲ್ಲಿ ತನ ಒಟ್ಟು 22,90,782 ಮಹಿಳೆಯರ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ವರದಿ : ಚಂದ್ರು ಆರ್ ಭಾನಾಪೂರ್