ಜಲ ಪಾತವನ್ನು ವೀಕ್ಷಿಸುತ್ತಾ ನಿಂತಿದ್ದ ಯುವಕನೋರ್ವ ಕಾಲುಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಬೈಂದೂರು ತಾಲೂಕಿನ ಕೊಲ್ಲೂರು ಸಮೀಪವಿರುವ ಅರಿಶಿನಗುಂಡಿ ಜಲಪಾತದಲ್ಲಿ ಘಟನೆ ನಡೆದಿದ್ದು, ಮೃತ ಯುವಕನನ್ನು ಭದ್ರಾವತಿಯ ಕೆ. ಎಚ್. ನಗರ ವಾಸಿ ಶರತ್ ಕುಮಾರ್(23) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಕೊಲ್ಲೂರಿಗೆ ಬಂದಿದ್ದ ಈತ ಜಲಪಾತ ವೀಕ್ಷಣೆಗೆ ತೆರಳಿದ್ದಾನೆ. ಬಂಡೆಕಲ್ಲಿನ ಮೇಲೆ ನಿಂತು ಜಲಪಾತ ವೀಕ್ಷಣೆ ಮಾಡುತ್ತಿದ್ದ ವೇಳೆಯಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದು, ನೀರಿನ ರಭಸಕ್ಕೆ ಆತ ಕೊಚ್ಚಿ ಹೋಗಿದ್ದಾನೆ.
ಯುವಕ ಜಲಪಾತದಲ್ಲಿ ಬೀಳುತ್ತಿ ರುವ ದೃಶ್ಯವನ್ನು ಮತ್ತೋರ್ವ ಯುವಕ ಸೆರೆ ಹಿಡಿದಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.