ಕೊಪ್ಪಳ : ಹನುಮ ಹುಟ್ಟಿದ ಜನ್ಮ ಸ್ಥಳ ಎಂದೇ ಪ್ರಸಿದ್ದ ಪಡೆದಿರುವ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಂಜನಾಂದ್ರಿ ಬೆಟ್ಟದಲ್ಲಿ ಇದೀಗ ದಿನ ನಿತ್ಯವೂ ಭಕ್ತ ಸಾಗರವೇ ಹರಿದು ಬರುತ್ತಿದೆ. ಕಳೆದ ಹಿಂದೆ 6 ವರ್ಷಗಳ ಹಿಂದಷ್ಟೇ ನಾಡಿನ ಜನರಿಗೆ ಹೆಚ್ಚು ಪರಿಚಿತವಿರದ ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟ. ಆಗ ಕೇವಲ 247 ರೂ. ಇದ್ದ ದೇವರ ಹುಂಡಿಯಲ್ಲಿ ಬಂದಿತ್ತು ಎಂದು ಅಲ್ಲಿನ ಅರ್ಚಕರು ಮಾಹಿತಿ ನೀಡಿದ್ದಾರೆ. ಆದರೆ ಈಗ ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಹುಂಡಿಯಲ್ಲಿ ಎಷ್ಟು ದೇಣಿಗೆ ಸಂಗ್ರಹವಾಗಿದೆ ಎಂದು ಕೇಳಿದರೇ ನಿಜಕ್ಕೂ ಅಚ್ಚರಿ ಪಡುತ್ತೀರಾ…?
ಈ ಹಿಂದೆ ಸುಮಾರು ವರ್ಷಗಳಿಂದ ಖಾಸಗಿ ಒಡೆತನದಲ್ಲಿ ನಡೆಸಲಾಗುತ್ತಿದ್ದ ಆಂಜನೇಯನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ದೇವಸ್ಥಾನವನ್ನು ಕಳೆದ 2018ರಲ್ಲಿ ಮುಜರಾಯಿ ಇಲಾಖೆ ಹಾಗೂ ಕಂದಾಯ ಇಲಾಖೆ ವಶಕ್ಕೆ ಪಡೆದುಕೊಂಡಿದೆ. ಕೊಪ್ಪಳ ಜಿಲ್ಲಾಡಳಿತವೇ ದೇವಸ್ಥಾನ ನಿರ್ವಹಣೆಯ ಹೊಣೆ ಹೊತ್ತುಕೊಂಡಿದ್ದು, ಕಳೆದು 6 ವರ್ಷಗಳ ಹಿಂದೆ 247 ರೂಪಾಯಿ ಇದ್ದದ್ದು, ಇದೀಗ 6 ವರ್ಷದಲ್ಲಿ ಸಂಗ್ರಹವಾಗಿದ್ದು, ಬರೋಬ್ಬರಿ 6 ಕೋಟಿ ರೂ. ಸಂಗ್ರಹವಾಗಿದೆ ಎಂದು ಮಾಹಿತಿ ಬಂದಿದೆ.
ಸದ್ಯ ಅಂಜನಾದ್ರಿ ಬೆಟ್ಟ ದೇವಸ್ಥಾನದ ಹುಂಡಿ ಹಣ, ಪಾರ್ಕಿಂಗ್ ಹಣ, ಲಾಡು, ತೀರ್ಥ ಪ್ರಸಾದಗಳ ಮಾರಾಟ, ವಿವಿಧ ಸೇವೆಗಳ ಬರುವ ಹಣ ಸೇರಿ ಒಟ್ಟು 6 ವರ್ಷಗಳ ಅವಧಿಯಲ್ಲಿ ಸುಮಾರು 6 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
*6 ಕೋಟಿಗೂ ಅಧಿಕ ಆದಾಯ ಸಂಗ್ರಹವಾಗಿದ್ದು ಇದರ ಹಂಚಿಕೆ ಹೇಗೆ ಆಗುತ್ತದೆ ಎನ್ನುವುದರ ಬಗ್ಗೆ ಇಲ್ಲಿದೆ ಮಾಹಿತಿ..!!*
ಒಟ್ಟಾರೆ ಈ ದೇವಾಲಯದ ಹುಂಡಿ ಹಾಗೂ ವಿವಿಧ ಮೂಲಗಳಿಂದ ಸಂಗ್ರವಾಹದ 6.78 ಕೋಟಿ ರೂ. ಆದಾಯದಲ್ಲಿ ದೇವಸ್ಥಾನದ ನಿರ್ವಹಣೆ, ಸಿಬ್ಬಂದಿಗಳ ವೇತನ ಸೇರಿದಂತೆ ದೇವಸ್ಥಾನದ ನಾನಾ ಖರ್ಚು ವೆಚ್ಚಗಳು ಸೇರಿದಂತೆ ಒಟ್ಟು 3,83,49,281 ರೂ.ಗಳನ್ನು ಖರ್ಚು ಮಾಡಲಾಗಿದೆ. ಇನ್ನುಳಿದ ಮೊತ್ತ 2,94,91,659 ರೂ.ಗಳನ್ನು ಬ್ಯಾಂಕಗಳಲ್ಲಿ ಉಳಿತಾಯ ಖಾತೆಗೆ ಸೇರಿಸಲಾಗಿದೆ ಎಂದು ಆಡಳಿತ ಮಂಡಳಿ ಮಾಹಿತಿ ನೀಡಿದೆ.
ಈ ದೇವಸ್ಥಾನದಲ್ಲಿ ಕಳೆದ 6 ವರ್ಷಗಳ ಹಿಂದೆ ಸಂಗ್ರಹವಾಗಿದ್ದ 200 ರೂಪಾಯಿಯಿಂದ ಆರಂಭವಾದ ಅಂಜನಾದ್ರಿಯ ಆದಾಯ ಇದೀಗ ಕೋಟಿಗಟ್ಟಲೆ ಆಗಿರುವುದು ನಿಜಕ್ಕೂ ಅಚ್ಚರಿ ಪಡುವ ವಿಷಯವೇ ಸರಿ. ದಿನದಿಂದದ ದಿನಕ್ಕೆ ಅಂಜನಾದ್ರಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಮತ್ತೊಂದಡೆ ಹುಂಡಿಗೆ ಸಂಗ್ರಹವಾಗುವ ಆದಾಯ ಕೂಡ ಹೆಚ್ಚಳವಾಗುತ್ತಿದೆ.
ವರದಿ : ಚಂದ್ರು ಆರ್. ಭಾನಾಪೂರ್