ಕೊಪ್ಪಳ : ಪ್ರಸ್ತುತ ಜೆಡಿಎಸ್, ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ ಎಂದು ಸಚಿವ ಶಿವರಾಜ್ ತಂಗಡಗಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಇಂದು ನಗರದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಸಾಧ್ಯವಿಲ್ಲ. ಮುಂದೆ ಜೆಡಿಎಸ್‌ನಲ್ಲಿ, ಬಿಜೆಪಿಯಲ್ಲಿ ಯಾವ ಶಾಸಕರು ಇರಲ್ಲ. ಜೆಡಿಎಸ್ , ಬಿಜೆಪಿ ಶಾಸಕರು ಕಾಂಗ್ರೆಸ್ ಬರ್ತಾರೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ.
ಇದೇ ವೇಳೆಯಲ್ಲಿ ಕಾಂಗ್ರೆಸ್ ಹಿರಿಯ ಶಾಸಕರು ಸಚಿವರ ವಿರುದ್ದ ಸಿಎಂಗೆ ಪತ್ರ ಬರೆದ್ದಾರೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ತಂಗಡಗಿ ಅವರು, ‘ಪತ್ರ ಬರೆದ ವಿಚಾರ ನನಗೆ ಮಾಹಿತಿ ಇಲ್ಲ. ಶಾಸಕರ ಕೆಲಸವನ್ನು ಸಚಿವರು ಮಾಡಲೇಬೇಕು. ಮುಖ್ಯಮಂತ್ರಿಗಳು ಏನು ಸೂಚನೆ ಕೊಡುತ್ತಾರೋ ಆ ಕೆಲಸ ಮಾಡಬೇಕು. ನನ್ನ ಇಲಾಖೆಯ ಎಲ್ಲಾ ಕೆಲಸಗಳನ್ನು ಮಾಡಿ ಕೊಡುತ್ತಿದ್ದೇನೆ’ ಎಂದು ಸ್ಪಷ್ಟನೆ ನೀಡಿದರು.