ಹಾವೇರಿ : ಮುಂದಿನ ತಿಂಗಳು ಆಗಸ್ಟ್ 1 ರಿಂದ ರಾಜ್ಯ ಬಜೆಟ್ ಜಾರಿಗೆ ಬರುತ್ತದೆ. ಅದೇ ರೀತಿಯಲ್ಲಿ ರಾಜ್ಯದ ರೈತರಿಗೆ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಯಾಗಿದೆ. ಈ ವಿಚಾರ ರೈತರ ಗಮನಕ್ಕೆ ತರಬೇಕು. ರೈತರಿಗೆ ಸಮಸ್ಯೆ ಆಗದಂತೆ 5 ಲಕ್ಷದವರೆಗೂ ಬಡ್ಡಿ ರಹಿತ ಸಾಲ ನೀಡಬೇಕು. ವಾರ್ಷಿಕ ಶೇ.3 ಬಡ್ಡಿ ದರದಲ್ಲಿ 15 ಲಕ್ಷದವರೆಗೂ ಸಾಲಸೌಲಭ್ಯವನ್ನು ರೈತರಿಗೆ ಒದಗಿಸಿಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಇಂದು ನಗರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಸಿಎಂ ಅವರು, ‘ಬಜೆಟ್‍ನಲ್ಲಿ ಘೋಷಿಸಿದಂತೆ ಆಗಸ್ಟ್ 1 ರಿಂದ ಕೃಷಿಭಾಗ್ಯ ಯೋಜನೆಗೆ ಮರು ಚಾಲನೆ ನೀಡಬೇಕು. ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರ ನಡೆಸಿರುವ ಮೌಲ್ಯಮಾಪನದಲ್ಲಿ ಕೃಷಿಹೊಂಡಗಳಿಂದ ರೈತ ಸಮುದಾಯಕ್ಕೆ ಬಹಳ ಅನುಕೂಲವಾಗಿದೆ ಎಂದು ತಿಳಿಸಿದರು.