ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ಇತ್ತೀಚೆಗೆ ವಿವಿಧ ಭಾಗಗಳಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ತೊಂದರೆಗಳು ಮತ್ತು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಲು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನಾಳೆ (ಜುಲೈ 26ರ) ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಶೇಷ ಸಭೆ ನಡೆಯಲಿದೆ. ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಅವರು ಸೂಚನೆ ನೀಡಿದ್ದಾರೆ.
ಮಳೆ ಹಿನ್ನೆಲೆ: ನಾಳೆ ಜಿಲ್ಲಾ ಉಸ್ತುವಾರಿ ಸಚಿವರಿಂದ ವಿಶೇಷ ಸಭೆ

- Post author:Prajavikshane
- Post published:25/07/2023 10:26 pm
- Post category:ಜಿಲ್ಲೆ / ತಾಲೂಕು / ಸ್ಥಳೀಯ
- Post comments:0 Comments
- Reading time:0 mins read