ಬೆಂಗಳೂರು : ರಾಜ್ಯದಲ್ಲಿ ಇತ್ತಿಚೆಗೆ ಭಾರೀ ಮಳೆಯಾಗುತ್ತಿದ್ದು,ಬಿತ್ತನೆ ಚುರುಕಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಶೇ 100 ರಷ್ಟು ಬಿತ್ತನೆಯಾಗಲಿದ್ದು, ರಾಜ್ಯದ ನೆರೆ, ಪ್ರವಾಹ, ಬರದ ಬಗ್ಗೆ ಪರಿಶೀಲನೆ ನಡೆಸೋದಕ್ಕಾಗಿ ಇದೇ ಜುಲೈ 31ರಿಂದ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು “ಕಾರ್ಗಿಲ್ ವಿಜಯ ದಿವಸ”ದ ಅಂಗವಾಗಿ ಹುತಾತ್ಮ ಯೋಧರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ‘ ರಾಜ್ಯದ ಕೆಲವು ಭಾಗಗಳಲ್ಲಿ ಮಳೆಯಿಂದಾಗಿ ನೆರೆ ಪರಿಸ್ಥಿತಿ ನಿರ್ಮಾಣವಾಗಿದ್ದು. ಅಂತಹ ಪ್ರದೇಶಗಳಿಗೆ ಶಿರ್ಘವೇ ಪರಿಹಾರ ಬಿಡುಗಡೆ ಮಾಡಲಾಗುವುದು ಹಾಗೂ ಕೆ.ಆರ್.ಎಸ್ , ಕಬಿನಿ, ಹಾರಂಗಿ, ಹೇಮಾವತಿ, ಆಲಮಟ್ಟಿ, ಸೇರಿದಂತೆ ಎಲ್ಲಾ ಜಲಾಶಯಗಳಿಗೆ ನೀರು ಬರುತ್ತಿರುವುದು ರೈತರಿಗೆ ಹಾಗೂ ಸರ್ಕಾರಕ್ಕೆ ಸಂತೋಷ ತಂದಿದೆ ಎಂದರು.
ಇದೇ ಜುಲೈ 31ಕ್ಕೆ ವಿವಿಧ ಜಿಲ್ಲೆಗಳ ಪ್ರವಾಸ ಮತ್ತು ಪರಿಶೀಲನೆ ವಿವರಗಳಿ ಇಂತಿವೆ
ಜುಲೈ 31 ರಂದು (ಸೋಮವಾರ) ಮಂಗಳೂರು, ಉಡುಪಿ, ಉತ್ತರ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಜನರನ್ನು ಭೇಟಿಯಾಗಿ ಅವರ ಕಷ್ಟಗಳನ್ನು ಆಲಿಸಲಾಗುವುದು. ಸಚಿವ ಕೃಷ್ಣ ಬೈರೇಗೌಡರು ನಿನ್ನೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ ಎಂದು ಹೇಳಿದರು.