ಕೊಪ್ಪಳ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರಿಂದ ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜುಲೈ 27ರಿಂದ ಆಗಸ್ಟ್ 04ರವರೆಗೆ ಜರುಗಲಿರುವ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲಾ ವಿಭಾಗ) ಕೊಪ್ಪಳ ಪರೀಕ್ಷಾ ಕೇಂದ್ರದಲ್ಲಿ ಗಣಕಯಂತ್ರ ಶಿಕ್ಷಣ (ಥಿಯರಿ ಮತ್ತು ಪ್ರಯೋಗಿಕ) ಪರೀಕ್ಷೆಗಳು ನಿಗದಿತ ದಿನಾಂಕದ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಸಿ.ಆರ್.ಪಿ.ಸಿ 1973 ಕಲಂ 144ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.