ಬೆಂಗಳೂರು : ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿಯಲ್ಲಿ ಇಂದು (ಶುಕ್ರವಾರ) ಬೆಳಿಗ್ಗೆಯವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಬಾಗಲಕೋಟೆ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.
ಇಂದಿನಿಂದ ಮುಂದಿನ 24 ರಿಂದ 36 ಗಂಟೆಗಳಲ್ಲಿ ಬೀದರ್, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ಜುಲೈ 27 ರಿಂದ ಜುಲೈ 31 ರವರೆಗೆ ಕರಾವಳಿಯಲ್ಲಿ 40 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ ನೀಡಿದೆ.