ಬೆಂಗಳೂರು : ಮುಂದಿನ ತಿಂಗಳು ಆಗಸ್ಟ್ 6 ರಂದು ನಡೆಯಬೇಕಿದ್ದ ಕರ್ನಾಟಕ ರಾಜ್ಯ ಪೊಲೀಸ್ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ನೇಮಕಾತಿ ವಿಭಾಗದ ಡೆಪ್ಯೂಟಿ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಆದೇಶವನ್ನು ಹೊರಡಿಸಿದ್ದು, ಈ ಆದೇಶದಲ್ಲಿ 2022-23ನೇ ಸಾಲಿನ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಕಲ್ಯಾಣ ಕರ್ನಾಟಕ ಪ್ರದೇಶದ 420 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಆಗಷ್ಟ್ 06 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಪರೀಕ್ಷೆಯ ಕುರಿತು ಮುಂದಿನ ದಿನಾಂಕವನ್ನು ನಂತರದಲ್ಲಿ ತಿಳಿಸಲಾಗುವುದು ಎಂದು ಉಲ್ಲೇಖ ಮಾಡಲಾಗಿದೆ. ಪೊಲೀಸ್ ಇಲಾಖೆ ಮೂಲಗಳ ಪ್ರಕಾರ 2023 ರ ಆಗಸ್ಟ್ 06 ರಂದು ಕಲ್ಯಾಣ ಕರ್ನಾಟಕದ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR/DAR)-420 ಪೋಸ್ಟ್‌ಗಳಿಗೆ ರಾಜ್ಯದ ವಿವಿ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲು ಉದ್ದೇಶಿಸಿತ್ತು. ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ 100 ಅಂಕಗಳಿಗೆ ವಸ್ತುನಿಷ್ಠ ಮಾದರಿಯ ಕನ್ನಡ / ಇಂಗ್ಲಿಷ್ ಭಾಷೆಯ ಪ್ರಶ್ನೆ ಪತ್ರಿಕೆ ಇರುತ್ತದೆ. ಸರಿ ಉತ್ತರಕ್ಕೆ 1 ಅಂಕ, ಪ್ರತಿ ತಪ್ಪು ಉತ್ತರಕ್ಕೆ 0.25 ಅಂಕ ಕಳೆಯಲಾಗುತ್ತದೆ. ಪರೀಕ್ಷೆ ಅವಧಿ 01 ಗಂಟೆ 30 ನಿಮಿಷ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು #https://apc420.ksp-recruitment.in/ ಈ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಲಾಗಿದೆ.