BIG NEWS : ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲು..!

You are currently viewing BIG NEWS : ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲು..!

ಬೆಂಗಳೂರು : ರಾಜ್ಯದಲ್ಲಿರುವ 47,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಕೆಲವೇ ಕೆಲವು ವಿದ್ಯಾರ್ಥಿಗಳು ಇದ್ದಾರೆ. ಮತ್ತೆ ಕೆಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿದ್ದರೂ ಶಿಕ್ಷಕರ ಕೊರತೆ ಎದುರಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ

ಇದಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ‘ರಾಜ್ಯದ 3,000ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾಗಿ, ವ್ಯಾಸಂಗ ಮಾಡುತ್ತಿದ್ದಾರೆ. ನಮ್ಮ ಸ್ವಂತ ಸ್ವಕ್ಷೇತ್ರ ಸೊರಬದಲ್ಲೇ 52 ಶಾಲೆಗಳಲ್ಲಿ ಶಿಕ್ಷಕರ ಕೊರತೆ ಇರುವುದು ನನ್ನ ಗಮನಕ್ಕೆ ಬಂದಿದೆ. 10 ಕ್ಕಿಂತ ಕಡಿಮೆ ದಾಖಲಾತಿ ಹೊಂದಿರುವ ಶಾಲೆಗಳ ಬಗ್ಗೆ ಇಲಾಖೆಯಿಂದ ವರದಿ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಲಭ್ಯವಿರುವ ಮಾಹಿತಿಯ ಪ್ರಕಾರ, 3,646 ಶಾಲೆಗಳು 0 ರಿಂದ 10 ರವರೆಗೆ ವಿದ್ಯಾರ್ಥಿಗಳನ್ನು ಹೊಂದಿದ್ದು, 100 ಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ 6,529 ಶಾಲೆಗಳು ಇದ್ದಾವೆ. ಆದರೆ, ಒಬ್ಬರೇ ಶಿಕ್ಷಕರೊಂದಿಗೆ ನಿರ್ವಹಿಸುತ್ತಿವೆ ಎಂದು ಮಾಹಿತಿ ಇದೆ. ಕುತೂಹಲಕಾರಿ ಸಂಗತಿ ಏನೆಂದರೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರವಾದ ಕನಕಪುರ ತಾಲ್ಲೂಕು ಒಂದರಲ್ಲೇ 72 ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲ ಎಂದು ತಿಳಿದು ಬಂದಿದೆ.

ಇನ್ನು ಹಾಸನ ಜಿಲ್ಲೆಯಲ್ಲಿ 386, ಶಿವಮೊಗ್ಗದಲ್ಲಿ 306, ಬೆಂಗಳೂರು ದಕ್ಷಿಣದಲ್ಲಿ 144, ಗದಗದಲ್ಲಿ 30 ಸೇರಿದಂತೆ ಒಟ್ಟು 6,529 ಶಾಲೆಗಳಲ್ಲಿ ಒಬ್ಬರೇ ಶಿಕ್ಷಕರಿದ್ದಾರೆ. ಶಿಕ್ಷಕರ ವರ್ಗಾವಣೆಯಿಂದ ಕೆಲವು ಶಾಲೆಗಳಲ್ಲಿ ಶಿಕ್ಷಕರ ಕೊರತೆ ಉಂಟಾಗಿದೆ ಎಂದು ಓರ್ವ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ. ಶಿಕ್ಷಕರ ವರ್ಗಾವಣೆಯಿಂದ ಖಾಲಿ ಉಳಿದಂತ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಕ್ರಮ ವಹಿಸಲಾಗುತ್ತಿದೆ. ಶಿಕ್ಷಕರ ನೇಮಕಾತಿ ಆಗುವವರೆಗೆ ಅತಿಥಿ ಶಿಕ್ಷಕರು ಬೋಧನಾ ಕಾರ್ಯದಲ್ಲಿ ತೊಡಗಲಿದ್ದಾರೆ ಎಂದಿದ್ದಾರೆ.

ಒಟ್ಟಾರೆ ರಾಜ್ಯದ 3,646 ಶಾಲೆಗಳಲ್ಲಿ 0-10 ವಿದ್ಯಾರ್ಥಿಗಳಿದ್ದರೇ, 10 ರಿಂದ 20 ವಿದ್ಯಾರ್ಥಿಗಳು 7,395 ಶಾಲೆಗಳಲ್ಲಿ ಇದ್ದಾರೆ, ಅದರಂತೆ 30 ರಿಂದ 50 ವಿದ್ಯಾರ್ಥಿಗಳು 6,833 ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. 9,006 ಶಾಲೆಗಳಲ್ಲಿ 50 ರಿಂದ 100 ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡುತ್ತಿದ್ದಾರೆ ಎಂದು ಶಿಕ್ಷಣ ಇಲಾಖೆಯ ಅಂಕಿ ಅಂಶಗಳ ಮಾಹಿತಿ ನೀಡಿದೆ.

ವರದಿ : ಚಂದ್ರು ಆರ್. ಭಾನಾಪೂರ್‌
(ವಿವಿಧ ಮೂಲಗಳಿಂದ ವಿಷಯ ಸಂಗ್ರಹ)

Leave a Reply

error: Content is protected !!