BIG BREAKING : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್‌ : ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು..!

You are currently viewing BIG BREAKING : ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್‌ : ವಿದ್ಯಾರ್ಥಿನಿಯರಿಗೆ ಷರತ್ತುಬದ್ಧ ಜಾಮೀನು..!

ಉಡುಪಿ : ಅಲ್ಲಿನ ನೇತ್ರ ಜ್ಯೋತಿ ಕಾಲೇಜಿನ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿದ್ಯಾರ್ಥಿಯೋರ್ವಳ ಖಾಸಗಿ ವಿಡಿಯೋ ಚಿತ್ರೀಕರಣ ಮಾಡಿರುವ ಪ್ರರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿನಿಯರಿಗೆ ಉಡುಪಿ ನ್ಯಾಯಾಲಯವು ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಸಿದೆ.

ಆರೋಪಿಗಳಾಗಿದ್ದ ವಿದ್ಯಾರ್ಥಿನಿಯರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಕಲಂ 509,204,175,34 ಐ,ಪಿ,ಸಿ, ಹಾಗೂ 66(ಇ) ಐಟಿ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಈ ಮೂವರು ವಿದ್ಯಾರ್ಥಿನಿಯರು ಇಂದು ಉಡುಪಿಯ ಪ್ರಥಮ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ ಸಿ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ಯಾಮ್ ಪ್ರಕಾಶ್ ಅವರು ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ. ತನಿಖಾಧಿಕಾರಿಗಳಿಗೆ ತನಿಖೆಗೆ ಸಹಕರಿಸುವುದು, ವಿಚಾರಣೆ ದಿನ ನ್ಯಾಯಾಲಯಕ್ಕೆ ಕಡ್ಡಾಯವಾಗಿ ಹಾಜರಾಗುವುದು, ಸಾಕ್ಷಿಗಳಿಗೆ ಯಾವುದೇ ಬೆದರಿಕೆಯೊಡ್ಡದಿರುವುದು ಹಾಗೂ ತಲಾ 20,000ರೂ. ಮೊತ್ತ ಬಾಂಡ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೇರಿದಂತೆ ಹಲವು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ ಎಂದು ತಿಳಿದು ಬಂದಿದೆ. ಆರೋಪಿ ವಿದ್ಯಾರ್ಥಿನಿಯರ ಪರ ಉಡುಪಿಯ ವಕೀಲರು ಅಸದುಲ್ಲಾ ಕಟಪಾಡಿ ವಾದಿಸಿದ್ದಾರೆ.

Leave a Reply

error: Content is protected !!