ರಾಜ್ಯದಲ್ಲಿನ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ಸಂಸ್ಥೆಗಳಲ್ಲಿ ಖಾಲಿ ಇರುವ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದ (ಸ್ಥಳೀಯ) ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಕುರಿತು ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಈ ಹಿಂದೆ ಜುಲೈ 22ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಬಳಿಕ ಹಲವು ಅಭ್ಯರ್ಥಿಗಳ ಸಲ್ಲಿಸಿದ ಮನವಿಯನ್ನು ಪರಿಗಣಿಸಿ ಜುಲೈ17ರ ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿ ಜುಲೈ 31ರ ವರೆಗೆ ಅವಕಾಶ ನೀಡಿತ್ತು.
ಇನ್ನು ಕೆಲವು ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಕೋರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸುತ್ತಿರುವ ಕಾರಣ, ಖಾಲಿ ಹುದ್ದೆಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸಲು ಆಗಷ್ಟ್ 07 ರಂದು 5.30 ರ ವರೆಗೆ ವಿಸ್ತರಿಸಲಾಗಿದೆ. ಆಗಸ್ಟ್ 10ರ ವರೆಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಮಾಹಿತಿ ಹಂಚಿಕೊಂಡಿದೆ.
ವರದಿ : ಚಂದ್ರು ಆರ್ ಭಾನಾಪೂರ್
(ವಿವಿಧ ಮೂಳಗಳಿಂದ ವಿಷಯ ಸಂಗ್ರಹ)
ಸದ್ಯದಲ್ಲೇ ನಿರೀಕ್ಷಿಸಿ ನಿಮ್ಮ ಮುಂದೆ ಇನ್ನಷ್ಟು ವಿಚಾರಗಳೊಂದಿಗೆ ಬರಲಿದ್ದೇವೆ ನಮ್ಮ ವೆಬ್‌ಸೈಟ್ ಅನ್ನು ಸಬ್‌ಸ್ಕ್ರೈಬ್ ಮಾಡಿ, ಬೆಲ್ ಒತ್ತಿ ನಮ್ಮ ಪ್ರತಿ ಸುದ್ದಿಯೂ ಕೂಡಲೇ ನಿಮ್ಮ ಮೊಬೈಲ್‌ಗೆ ಬರಲಿದೆ. ಅದೇ ರೀತಿ ಈ ಕಳೆಗೆ ಇರುವ ಯೂಟೂಬ್ ಚಾನಲ್ ಅನ್ನು ಸಬ್‌ಸ್ಕ್ರೈಬ್ ಮಾಡಿ…