ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಸೌಜನ್ಯ ಕೇಸ್ ಮತ್ತೆ ಮುನ್ನಲೆಗೆ ಬಂದಿದ್ದು, ಅದಾಗಲೇ ಮತ್ತೆ ಅಪ್ರಾಪ್ತ ಬಾಲಕಿ ಮೇಲೆ ಮೂವರು ಕಾಮುಕರು ಅಟ್ಟಹಾಸ ಮೇರೆದಿದ್ದಾರೆ. ಅಪ್ರಾಪ್ತ ಬಾಲಕಿಯ ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಪುಟ್ಟ ಬಾಲಕಿ ಎನ್ನುವುದನ್ನೂ ನೋಡದೇ ಕಾಮಾಂಧರು ಪ್ರತ್ಯೇಕವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಈ ಒಂದು ಅಮಾನವೀಯ ಘಟನೆ ನಡೆದಿರುವುದು ಇತ್ತೀಚೆಗೆ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಈಗಾಗಲೇ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೋಕ್ಸೋ (POCSO) ಹಾಗೂ ದಲಿತ ದೌರ್ಜನ್ಯ ತಡೆ ಕಾಯ್ದೆ (Prevention of Dalit Atrocities Act) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
