ಕೊಪ್ಪಳ : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ “ವಾಕ್ ಇನ್ ಇಂಟರ್‌ವ್ಯೂ”ವನ್ನು ಆಗಸ್ಟ್ 04ರ ಬೆಳಿಗ್ಗೆ 10.30 ರಿಂದ 2.30ರವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನಡೆಯಲಿದೆ.
ಗುರುಕುಲ ಸಾಫ್ಟ್ವೇರ್ ಸಲ್ಯೂಷನ್ ಪ್ರವೇಟ್ ಲಿ, ಕೊಪ್ಪಳ ಮತ್ತು ಎನ್.ಒ.ಸಿ. ಪ್ರವೇಟ್ ಲಿ. ಕೊಪ್ಪಳ ಇವರು ಆಗಮಿಸಿ ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ಪಿಯುಸಿ ಮತ್ತು ಯಾವುದೇ ಪದವಿ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ತಿಲಿಸಿದೆ.
ಆಸಕ್ತಿಯುಳ್ಳ 18 ರಿಂದ 35 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್) ಹಾಗೂ ಪಾಸ್ ಪೋರ್ಟ ಅಳತೆಯ ಭಾವಚಿತ್ರಗಳೊಂದಿಗೆ ಭಾಗವಹಿಸಿ ಉದ್ಯೋಗದ ನೆರವು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859, 8105693234, 6361143422ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.