ಬೆಂಗಳೂರು : ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ “ಶಕ್ತಿ ಯೋಜನೆ”ಗೆ ಜೂನ್ 11ರಂದು ಚಾಲನೆ ನೀಡಲಾಗಿತ್ತು. ಈವರೆಗೆ 4 ನಿಗಮಗಳಲ್ಲಿ 29,32,49,151 ಮಹಿಳೆಯರು ಪ್ರಯಾಣಿಸಿದ್ದಾರೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ. ಈ 4 ನಿಗಮಗಳು ಒಟ್ಟು 6,87,49,57,753 ರೂ., ಮೌಲ್ಯದ ಶೂನ್ಯ ಟಿಕೆಟ್ ವಿತರಣೆ ಮಾಡಿವೆ. “ಶಕ್ತಿ ಯೋಜನೆ” ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ಗಳಲ್ಲಿ ವಿತರಿಸಲಾಗಿರುವ ಟಿಕೆಟ್ನ ಒಟ್ಟು ಮೊತ್ತದ ಮೊದಲ ಕಂತನ್ನು ರಾಜ್ಯ ಸರ್ಕಾರ ನಿನ್ನೆ (ಮಂಗಳವಾರ) ಬಿಡುಗಡೆ ಮಾಡಿದೆ ಎಂದು ವರದಿಯಾಗಿದೆ.
ರಾಜ್ಯದ 4 ನಿಗಮಗಳು ಒಟ್ಟಾಗಿ ವಿತರಿಸಿರುವ ಶೂನ್ಯ ಟಿಕೆಟ್ ದರ 6,87,49,57,753 ರೂಪಾಯಿಗಳು ಆಗಿದ್ದು, ಈ ಮೊತ್ತದ ಮೊದಲ ಕಂತನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ನಿಗಮಗಳಿಗೆ ಮೊದಲ ಕಂತಿನ ಹಣವಾಗಿ 125.48 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (Karnataka State Road Transport Corporation) 47.15 ಕೋಟಿ ರೂಪಾಯಿಗಳು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ (Bengaluru Metropolitan Transport Corporation-ಬಿಎಂಟಿಸಿ) 21.85 ಕೋಟಿ ರೂಪಾಯಿಗಳು., ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (North West Karnataka Road Transport Corporation-NWKRTC) 32.57 ಕೋಟಿ ರೂಪಾಯಿಗಳು., ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಕ್ಕೆ (Kalyana Karnataka Road Transport Corporation-KKRTC) 23.90 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ಇದೆ.
ವರದಿ : ಚಂದ್ರು ಆರ್ ಭಾನಾಪೂರ್
(ವಿವಿಧ ಮೂಳಗಳಿಂದ ವಿಷಯ ಸಂಗ್ರಹ)