BREAKING : ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಾಸಕ ರಾಯರಡ್ಡಿ.!!

You are currently viewing BREAKING : ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ಶಾಸಕ ರಾಯರಡ್ಡಿ.!!

ಕುಕನೂರು : ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಬಂದು ಎರಡು ಸಲ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಳೇ ಮಂದಿ, ಮೂಲ ಕಾಂಗ್ರೆಸ್ಸಿಗರು ಏನು ಅಂದುಕೊಳ್ಳಬೇಕು, ಕೆಲವೊಮ್ಮೆ ಅದೃಷ್ಟವೂ ಮುಖ್ಯವಾಗುತ್ತದೆ ಎಂದು ಮಾಜಿ ಸಚಿವ, ಯಲಬುರ್ಗಾ ಶಾಸಕ ಬಸವರಾಜ್ ರಾಯರಡ್ಡಿ ಅವರು ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.

ಇಂದು ಕುಕನೂರು ತಾಲೂಕಿನ ತಳಕಲ್ ಗ್ರಾಮದಲ್ಲಿ ಗ್ಯಾರಂಟಿ ಯೋಜನೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ರಾಯರಡ್ಡಿ, ‘ಸಿದ್ದರಾಮಯ್ಯ ಅವರು ಹೊರಗಿನಿಂದ ಬಂದು ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಗಿದ್ದಾರೆ’ ಎಂದು ಹೇಳುವ ಮೂಲಕ ತಮಗೆ ಮಂತ್ರಿ ಸ್ಥಾನ ಸಿಗಲಿಲ್ಲ ಎಂದು ಪರೋಕ್ಷವಾಗಿ ಹತಾಶೆಯ ಮಾತುಗಳನ್ನಾಡಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ಆಡಳಿತದ ಈ ಅವಧಿಯಲ್ಲಿ ಮಾಜಿ ಸಚಿವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಮೂಲ ಕಾಂಗ್ರೆಸ್, ವಲಸಿಗ ಕಾಂಗ್ರೆಸ್ ಫೈಟ್ ನಡೆಯುತ್ತಿದೆಯೇ ಎಂಬ ಅನುಮಾನ ಕಾಣಿಸುತ್ತಿದೆ.

ಇತ್ತೀಚಿಗೆ ಮುಖ್ಯಮಂತ್ರಿ ಗಳಿಗೆ ಸಿ ಎಲ್ ಪಿ ಸಭೆ ಕರೆಯುವಂತೆ ಪತ್ರ ಬರೆದು ಸುದ್ದಿಯಲ್ಲಿದ್ದ ಶಾಸಕ ರಾಯರಡ್ಡಿ ಅವರು ಈಗ ಮತ್ತೆ ಸಿದ್ದರಾಮಯ್ಯ ಅವರು ವಲಸಿಗರು ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಕ್ಕಿದೆ, ತಮಗೆ ಮಂತ್ರಿ ಸ್ಥಾನ ಸಿಗಲಿಲ್ಲ ಎಂಬ ಅಸಮಾಧಾನದ ಮಾತುಗಳನ್ನು ಆಡಿದ್ದು ಮತ್ತೊಂದು ಚರ್ಚೆಗೆ ಎಡೆಮಾಡಿಕೊಟ್ಟಿದೆ.

Leave a Reply

error: Content is protected !!