ನವದೆಹಲಿ : ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾಗಲಿದ್ದು, ರಾಜ್ಯದ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2ನೇ ಭಾರಿ ಸಿಎಂ ಆಗಿ ಆಯ್ಕೆಯಾದ ಬಳಿಕ ಸಿಎಂ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿ ಮಾಡುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಭೇಟಿಗೆ ಸಿಎಂ ಅವರಿಗೆ ಸಮಯ ಸಿಕ್ಕಿದೆ ಎಂದಿ ತಿಳಿದು ಬಂದಿದೆ.
ರಾಜಕೀಯ ಬದ್ದ ವೈರಿಗಳಾಗಿರುವ ಇಬ್ಬರ ನಡುವೆ ಹಲವುಬಾರಿ ವಾಕ್ಸಮರ ಕೂಡ ಕೇಳಿ ಬಂದಿತ್ತು, ಆದರೆ, ರಾಜಕಾರಣ ಹೊರತಾಗಿ ಕೂಡ ಇಬ್ಬರು ನಾಯಕರು ಇಂದು ಭೇಟಿಯಾಗುತ್ತಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಬಗ್ಗೆ ಕೂಡ ಸಿಎಂ ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇನ್ನೂ ಜಿಎಸ್‌ಟಿ ಅನುದಾನ ಬಿಡುಗಡೆ ಮಾಡುವ ಬಗ್ಗೆ ಸಚಿವೆ ನಿರ್ಮಲ ಸೀತಾರಾಮನ್ ಅವರನ್ನು ಕೂಡ ಇಂದು ಸಿಎಂ ಸಿದ್ದರಾಮಯ್ಯ ಭೇಟಿ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ.