ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯ ಅವರು ದೆಹಲಿ ಪ್ರವಾಸದಲ್ಲಿದ್ದು, ನಿನ್ನೆ ಅವರು ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು. ಇಂದು ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ ಸಂಸತ್ ಭವನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಇದೇ ವೇಳೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈಸೂರು ದಸರಾದ ಅಂಬಾರಿಯ ಶ್ರೀಗಂಧದ ಕಲಾಕೃತಿಯನ್ನು ಪ್ರಧಾನಿಗೆ ಉಡುಗೊರೆಯಾಗಿ ನೀಡಿದರು.
ಇದಕ್ಕೂ ಮುನ್ನ ಅವರು ನಿನ್ನೆ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಅವರ ಆರೋಪ ಪೂರ್ತಿ ಸುಳ್ಳಾಗಿದೆ. ನಾವು ಬಜೆಟ್ ನಲ್ಲಿ ಐದು ಗ್ಯಾರಂಟಿಗಳಿಗೆ ಹಣ ಒದಗಿಸುವ ಜತೆಗೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ 76 ಭರವಸೆಗಳಿಗೂ ಹಣ ನೀಡಿದ್ದೇವೆ. ಇವೆಲ್ಲವೂ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರ ಬದುಕಿಗೂ ಸ್ಪಂದಿಸುವ ಯೋಜನೆಗಳಾಗಿವೆ ಎಂದು ಹೇಳಿದರು.ದೇಶದ ಆರ್ಥಿಕತೆಯನ್ನು ಹಾಳು ಗೆಡವಿದ ಪ್ರಧಾನಿ ಮೋದಿ ಅವರು ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಅರ್ಥ ಮಾಡಿಕೊಳ್ಳಲಿ. ಇನ್ನಾದರೂ ದೇಶವನ್ನು ಸರಿ ದಾರಿಯಲ್ಲಿ ಮುನ್ನಡೆಸಲಿ ಎಂದು ಹೇಳಿದ್ದಾರೆ. ಇದರ ಜೊತೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ರಕ್ಷಣಾ ಸಚಿವ ರಾಜನಾಥ ಸಿಂಗ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದೇನೆ ಎಂದು ಟ್ವಿಟ್ ಮಾಡಿದ್ದಾರೆ.