ಕೊಪ್ಪಳ : ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮ ಗೃಹ ಜೋತಿ ಯೋಜನೆಗೆ ಚಾಲನೆ ಕಾರ್ಯಕ್ರಮ ಆಗಸ್ಟ್ 05ರಂದು ಮಧ್ಯಾಹ್ನ 12.30 ಕ್ಕೆ ಕೊಪ್ಪಳದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಉದ್ಘಾಟಿಸುವರು. ಇಂಧನ ಸಚಿವರಾದ ಕೆ.ಜೆ ಜಾರ್ಜ್ ಅವರು ಘನ ಉಪಸ್ಥಿತಿ ವಹಿಸುವರು.
ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಬಸವರಾಜ ರಾಯರೆಡ್ಡಿ, ದೊಡ್ಡನಗೌಡ ಹನುಮಗೌಡ ಪಾಟೀಲ, ಗಾಲಿ ಜನಾರ್ಧನರೆಡ್ಡಿ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ನಗರಸಭೆ ಅಧ್ಯಕ್ಷರಾದ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಭಾಗವಹಿಸುವರು. ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ಸುನೀಲ್ ವಂಟಗೋಡಿ, ಗು.ವಿ.ಸ.ಕಂ.ನಿ ಬಳ್ಳಾರಿ ಕಾರ್ಯ ಮತ್ತು ಪಾಲನಾ ವಲಯದ ಮುಖ್ಯ ಅಭಿಯಂತರರಾದ ಲಕ್ಷ್ಮಣ್ ಚವ್ಹಾಣ್, ಕಾರ್ಯ ಮತ್ತು ಪಾಲನಾ ವಲಯ ಕೊಪ್ಪಳ ವೃತ್ತ ಅಧೀಕ್ಷಕ ಅಭಿಯಂತರರಾದ ವೈ.ಮೊಹಮ್ಮದ್ ಶರೀಫ್, ಹಾಗೂ ಗಂಗಾವತಿ ಕಾರ್ಯ ಮತ್ತು ಪಾಲನಾ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರಾದ ರಿಯಾಜ್ ಅಹ್ಮದ್ ಉಪಸ್ಥಿತರಿರುವರು ಎಂದು ಕೊಪ್ಪಳ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಾದ ಫಣಿ ರಾಜೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.