ALERT : ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿಗೆ ಸೂಚನೆ!

You are currently viewing ALERT : ಅಂಗಡಿ, ವಾಣಿಜ್ಯ ಸಂಸ್ಥೆಗಳ ನೋಂದಣಿಗೆ ಸೂಚನೆ!

ಕೊಪ್ಪಳ : ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿರುವ ಎಲ್ಲಾ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿ ಸುಧಾ ಗರಗ ಅವರು ತಿಳಿಸಿದ್ದಾರೆ.

ಜಿಲ್ಲೆಯ ಎಲ್ಲಾ ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳನ್ನು ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ-1961 ಮತ್ತು ನಿಯಮಾವಳಿ-1963ರ ಕಲಂ4(1) & (3)ರ ಮೇರೆಗೆ ಸಂಸ್ಥೆಯ ಮಾಲೀಕರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ. ಈಗಾಗಲೇ ನೋಂದಣಿ ಮಾಡಿಸಿಕೊಂಡ ಸಂಸ್ಥೆಗಳನ್ನು ಹೊರತುಪಡಿಸಿ ಉಳಿದ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಮಾಲೀಕರು ಹಾಗೂ ಉದ್ದಿಮೆದಾರರು ತಮ್ಮ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳನ್ನು ಕೊಪ್ಪಳ ವೃತ್ತ, ಗಂಗಾವತಿ ವೃತ್ತ ಹಾಗೂ ಕುಷ್ಟಗಿ ವೃತ್ತದ ಕಾರ್ಮಿಕ ನಿರೀಕ್ಷಕರ ಕಚೇರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದಾಗಿದೆ.

ಅದಲ್ಲದೇ ಎಲ್ಲಾ ಸಂಸ್ಥೆಗಳ ಮಾಲೀಕರು 15 ದಿನಗಳ ಒಳಗಾಗಿ ರಾಜ್ಯ ಸರ್ಕಾರದ ಇ-ಕಾರ್ಮಿಕ ತಂತ್ರಾಂಶದಲ್ಲಿ ವೆಬ್‌ಸೈಟ್ http://www.ekarmika.karnataka.gov.in/rkarmika/Staric/Home.aspx ನಲ್ಲಿ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನೋಂದಣಿ ಪತ್ರ ಪಡೆದುಕೊಳ್ಳಬಹುದಾಗಿರುತ್ತದೆ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಪ್ರಟಕಣೆಯಲ್ಲಿ ತಿಳಿಸಿದೆ.

Leave a Reply

error: Content is protected !!