BIG NEWS : ರಾಜ್ಯದ ರೈತರಿಗೆ ಮಹತ್ವದ ಮಾಹಿತಿ ಇಲ್ಲದೆ : ತಪ್ಪದೇ ಓದಿ..!

You are currently viewing BIG NEWS : ರಾಜ್ಯದ  ರೈತರಿಗೆ ಮಹತ್ವದ ಮಾಹಿತಿ ಇಲ್ಲದೆ : ತಪ್ಪದೇ ಓದಿ..!

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ 2023-24 ನೇ ಸಾಲಿನಲ್ಲಿಯೂ ಜಾರಿಯಲ್ಲಿದ್ದು, ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ ಪ್ರಾಕೃತಿಕ ವಿಕೋಪ ಸೇರಿದಂತೆ ಹಲವಾರು ಕಾರಣಗಳಿಂದ ಬೆಳೆ ನಷ್ಟ ಉಂಟಾದಾಗ ರೈತರಿಗೆ ವಿಮಾ ರಕ್ಷಣೆ ಮತ್ತು ಆರ್ಥಿಕ ಬೆಂಬಲ ನೀಡುವುದು ಈ ಯೋಜನೆಯ ಬಹು ಮುಖ್ಯ ಉದ್ದೇಶವಾಗಿದೆ.

ಈ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿಯಲ್ಲಿ ರೈತರ ವಿಮಾ ಕಂತನ್ನು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಮುಂಗಾರು ಹಂಗಾಮಿಗೆ ಶೇ.2 ಎಂದು ಪರಿಗಣಿಸಲಾಗಿದ್ದು, ಮುಖ್ಯ ಬೆಳೆಗಳಿಗೆ ಯೋಜನೆಯನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಅಳವಡಿಸಲಾಗುವುದು. ಈ ಯೋಜನೆಯು ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಆಯ್ಕೆಯಾಗಿರುತ್ತದೆ, ಆದರೆ, ಅವರಿಗೆ ಸಂದಾಯವಾಗಿರುವ ವಿಮಾ ಮೊತ್ತವು ಒಂದೇ ಆಗಿದೆ ಎಂದು ವಿವರಿಸಲಾಗಿದೆ.

ರೈತರಿಗೆ ಬಿತ್ತನೆ ಅಥವಾ ನಾಟಿ ಕಾಲಕ್ಕೆ ಆಗುವ ನಷ್ಟ, ಬೆಳವಣಿಗೆ ಹಂತದಲ್ಲಿ ಆಗುವ ನಷ್ಟ ಹಾಗೂ ಕಟಾವಿನ ಬಳಿಕ ನಷ್ಟವನ್ನು ಸಹ ಪರಿಗಣಿಸಲಾಗುವುದು. ಈ ಪ್ರಸಕ್ತ ಸಾಲಿನಲ್ಲಿ ರಾಜ್ಯದ ಆಯಾ ಜಿಲ್ಲೆಗೆ ಸಂಬಂಧಿಸಿದಂತೆ, ಕೃಷಿ ವಿಮಾ ಕಂಪನಿಯನ್ನು ಬೆಳೆ ವಿಮೆ ಕಾರ್ಯಕ್ಕೆ ಆಯ್ಕೆ ಮಾಡಲಾಗಿದೆ. ವಿಮಾ ಅರ್ಜಿಗಳು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಲಭ್ಯವಿದ್ದು, ಈ ಯೋಜನೆಯಡಿಯಲ್ಲಿ ಅರ್ಜಿಯನ್ನು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು.

2023ನೇ ಸಾಲಿನ ಮುಂಗಾರು ಹಂಗಾಮಿನ ವಿಮಾ ಮೊತ್ತ ಹಾಗೂ ರೈತರ ವಿಮಾ ಕಂತಿನ ವಿವರಗಳು ಹೀಗಿವೆ

* ಭತ್ತ (ನೀರಾವರಿ) ಸಾಮಾನ್ಯ ವಿಮಾ ಮೊತ್ತ (ರೂ.ಗಳಲ್ಲಿ) ರೂ.93,250, ರೈತರ ವಿಮಾ ಕಂತು(ಶೇ.) 2, ರೈತರ ವಿಮಾಕಂತು ಮೊತ್ತ ರೂ.1865. ಭತ್ತ(ಮಳೆಯಾಶ್ರಿತ) ವಿಮಾ ಮೊತ್ತ ರೂ.63,750, ರೈತರ ವಿಮಾ ಕಂತು(ಶೇ.) 2, ರೈತರ ವಿಮಾ ಕಂತು ಮೊತ್ತ ರೂ.1275, ನೋಂದಾಯಿಸಿಕೊಳ್ಳಲು ಆಗಸ್ಟ್, 16 ಕೊನೆಯ ದಿನ.

Leave a Reply

error: Content is protected !!