ಬೆಂಗಳೂರು : ರಾಜ್ಯದಲ್ಲಿರುವ ಸರಕಾರಿ ಶಾಲೆಗಲ್ಲಿ ಖಾಲಿ ಇರುವ ಶಿಕ್ಷಕರ ನೇಮಕಾತಿಗಾಗಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET) 2023ರ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ್ದು, ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಹಾಗೂ ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ನೋಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಂದೇ (ಆಗಷ್ಟ್ 05) ಅರ್ಜಿ ಸಲ್ಲಿಸಲುವುದಕ್ಕೆ ಕೊನೆ ದಿನವಾಗಿದ್ದು, ಈ ಕೂಡಲೇ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KAR-TET-2023) ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ #www.schooleducation.kar.nic.in ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ 14 ರಿಂದ ಆಗಷ್ಟ್ 05ರವರೆಗೆ ಅವಕಾಶ ಕಲ್ಪಿಸಿತ್ತು.
ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಂಡು, ಪರಿಶೀಲಿಸಿ, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್ ಸೈಟ್ www.schooleducation.kar.nic.inನ್ನು ಸಂಪರ್ಕಿಸಿ.