BIG NEWS : ಬಿಜೆಪಿ ರಾಜ್ಯಾಧ್ಯಕ್ಷನ ನೇಮಕ : ಇಂದು ಬಿಜೆಪಿ ವರಿಷ್ಠರ ಭೇಟಿಯಾಗಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

You are currently viewing BIG NEWS : ಬಿಜೆಪಿ ರಾಜ್ಯಾಧ್ಯಕ್ಷನ ನೇಮಕ : ಇಂದು ಬಿಜೆಪಿ ವರಿಷ್ಠರ ಭೇಟಿಯಾಗಲಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯ ಬಿಜೆಪಿಯಲ್ಲಿ ಮೂರು ತಿಂಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷನ ನೇಮಕ ಇದೀಗ ಚಟುವಟಿಕೆ ಗರಿಗೆದರಿದ್ದು, ಆ ಹುದ್ದೆಯ ಆಕಾಂಕ್ಷಿಯೂ ಆಗಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ಹೈಕಮಾಂಡ ವರಿಷ್ಠರ ಭೇಟಿಗಾಗಿ ದೆಹಲಿಗೆ ತೆರಳಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಬಂದಿದೆ.

ನಿನ್ನೆ (ಭಾನುವಾರ) ಸಂಜೆ ದೆಹಲಿಗೆ ತೆರಳಿದ ಬೊಮ್ಮಾಯಿ ಅವರು ಇಂದು (ಸೋಮವಾರ) ಕೇಂದ್ರದ ಗೃಹ ಸಚಿವ ಅಮಿತ್‌ ಶಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತಿತರ ಭೇಟಿ ಮಾಡಿ, ಪಕ್ಷದ ಕುರಿತು ಸಮಾಲೋಚನೆ ನಡೆಸಲಿದ್ದಾರೆ. ಬಿಜೆಪಿಯಲ್ಲಿ ಮಹತ್ವದ ಹುದ್ದೆಗಳಾಗಿರುವ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ಶಾಸಕಾಂಗ ಪಕ್ಷದ ನಾಯಕನ ಸ್ಥಾನಗಳ ಪೈಕಿ ಒಂದಕ್ಕೆ ಪ್ರಬಲ ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಬೇಕು ಎಂಬ ಬಿಜೆಪಿ ಪಕ್ಷದಲ್ಲೇ ಭಾರಿ ಚರ್ಚೆ ನಡೆದಿದೆ.

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಅಥವಾ ಹಿಂದುಳಿದ ಸಮುದಾಯ ಪರಿಗಣಿಸುವ ಸಾಧ್ಯತೆ ಕಂಡು ಬರುತ್ತಿದ್ದು, ಶಾಸಕಾಂಗ ಪಕ್ಷದ ನಾಯಕನ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಬೊಮ್ಮಾಯಿ ಅವರನ್ನೇ ಶಾಸಕಾಂಗ ಪಕ್ಷದ ನಾಯಕನನ್ನಾಗಿ ಅಂತಿಮಗೊಳಿಸುತ್ತಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿದೆ. ಸದ್ಯ ಬಿಜೆಪಿ ಪ್ರಬಲ ಶಾಸಕರ ಪೈಕಿ ಮಾಜಿ ಸಿಎಂ ಆಗಿರುವವರು ಬೊಮ್ಮಾಯಿ ಒಬ್ಬರೇ. ಅವರನ್ನು ನೇಮಕ ಮಾಡುವುದರ ಬಗ್ಗೆ ಚರ್ಚಿಸುವ ಸಾಧ್ಯತೆ ಹೆಚ್ಚಿದೆ. ಒಂದು ವೇಳೆ ಬೇರೊಬ್ಬರನ್ನು ನೇಮಕ ಮಾಡುವುದಾದರೂ ಅದರ ಕುರಿತು ಬೊಮ್ಮಾಯಿ ಅವರ ಅಭಿಪ್ರಾಯ ಪಡೆಯಬಹುದು ಎಂದು ತಿಳಿದು ಬಂದಿದೆ.

Leave a Reply

error: Content is protected !!