1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

You are currently viewing 1ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಕೊಪ್ಪಳ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ 1ನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿಗಳಾದ ಎಂ.ಸುAದರೇಶಬಾಬು ಅವರ ಅಧ್ಯಕ್ಷತೆಯಲ್ಲಿ ಆಗಸ್ಟ್ 7ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು, ಅರ್ಜಿ ಆಹ್ವಾನಿಸುವುದು, ಫಲಾನುಭವಿಗಳ ಆಯ್ಕೆ ಸೇರಿದಂತೆ ಯಾವುದೇ ಪ್ರಕ್ರಿಯೆಯನ್ನು ವಿಳಂಬ ಮಾಡದಂತೆ ಹಾಗೂ ಪಾರದರ್ಶಕವಾಗಿ ನಡೆಸಬೇಕು. ಬಿಡುಗಡೆಯಾದ ಅನುದಾನವು ಕಾಲಮಿತಿಯೊಳಗೆ ಬಳಕೆಯಾಗಲು ಎಲ್ಲಾ ರೀತಿಯ ಅಗತ್ಯ ಕ್ರಮ ವಹಿಸಬೇಕು ಎಂದು ನಿರ್ದೆಶನ ನೀಡಿದರು.

ಗಂಗಾವತಿ ತಾಲೂಕಿನಲ್ಲಿ 9, ಕೊಪ್ಪಳ ತಾಲೂಕಿನಲ್ಲಿ 4 ಹಾಗೂ ಕುಷ್ಟಗಿ ತಾಲೂಕಿನಲ್ಲಿ 5 ಸೇರಿ ಒಟ್ಟು 18 ಉರ್ದು ಕಿರಿಯ ಪ್ರಾಥಮಿಕ ಶಾಲೆಗಳಿವೆ. ನಗರ ಪ್ರದೇಶದಲ್ಲಿ 6 ಶಾಲೆಗಳಿವೆ. ಗಂಗಾವತಿಯಲ್ಲಿ 8, ಕೊಪ್ಪಳದಲ್ಲಿ 6, ಕುಷ್ಟಗಿಯಲ್ಲಿ 3 ಯಲಬುರ್ಗಾದಲ್ಲಿ 5 ಸೇರಿ ಗ್ರಾಮೀಣ ಪ್ರದೇಶದಲ್ಲಿ 22 ಹಾಗೂ ಗಂಗಾವತಿ, ಕೊಪ್ಪಳ, ಕುಷ್ಟಗಿ ಮತ್ತು ಯಲಬುರ್ಗಾ ಸೇರಿ ನಗರ ಪ್ರದೇಶಗಳಲ್ಲಿ 22 ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಿವೆ. ಕೊಪ್ಪಳ ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಸೇರಿ ಒಟ್ಟು 3 ಉರ್ದು ಪ್ರೌಢಶಾಲೆಗಳಿವೆ. ಉರ್ದು ಕಿರಿಯ, ಉರ್ದು ಹಿರಿಯ ಮತ್ತು ಉರ್ದು ಪ್ರೌಢ ಶಾಲೆಗಳು ಸೇರಿ ಜಿಲ್ಲೆಯಲ್ಲಿ ಇರುವ ಎಲ್ಲಾ 63 ಶಾಲೆಗಳಿಗೆ ಸ್ವಂತ ಕಟ್ಟಡಗಳಿವೆ. ಉರ್ದು ಕಿರಿಯ ಪ್ರಾಥಮಿಕ 11, ಉರ್ದು ಹಿರಿಯ ಪ್ರಾಥಮಿಕ 27 ಹಾಗೂ ಉರ್ದು ಪ್ರೌಢಶಾಲೆಗಳು 6 ಸೇರಿ ಒಟ್ಟು 44 ಖಾಲಿ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣಧಿಕಾರಿ ಸುರೇಶ ಕೋಕರೆ ಅವರು ಸಭೆಗೆ ಮಾಹಿತಿ ನೀಡಿದರು.

ಕಮ್ಯೂನಲ್ ಹಾರ್ಮೊನಿ ಆಫ್ 2008 ಕಾಯಿದೆಯ ಮಾರ್ಗಸೂಚಿಯನ್ವಯ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮೇಲಿಂದ ಮೇಲೆ ವಿವಿಧೆಡೆ ಜನ ಸಂಪರ್ಕ ಸಭೆಗಳನ್ನು ನಡೆಸಿ ಕೋಮು ಸಾಮರಸ್ಯ ಕಾಪಾಡಲು ತಿಳಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಜಂಟಿ ಕೃಷಿ ನಿರ್ದೇಶಕರು, ರೇಷ್ಮೆ ಕೃಷಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಕಾರ್ಮಿಕ ಅಧಿಕಾರಿಗಳು, ಜಿಲ್ಲಾ ವಕ್ಫ ಕಚೇರಿಯ ಅಧಿಕಾರಿಗಳು, ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರು, ಜೆಸ್ಕಾಂ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಅಧಿಕಾರಿಗಳು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಜಿಲಾ ವ್ಯವಸ್ಥಾಪಕರು, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

error: Content is protected !!