ಬೆಂಗಳೂರು :ಕಳೆದ ಆಗಸ್ಟ್ 7 ರಂದು ಥೈಲ್ಯಾಂಡಿನ ಬ್ಯಾಂಕಾಕ್ ನಲ್ಲಿ ಹೃದಯಾಘಾತಕ್ಕೆ ಒಳಗಾಗಿ ಅಕಾಲಿಕವಾಗಿ ಮರಣಹೊಂದಿದ್ದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥೀವ ಶರೀರ ನಿನ್ನೆ ಮಧ್ಯರಾತ್ರಿ ಬೆಂಗಳೂರಿಗೆ ತರಲಾಗಿದೆ. ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂನಲ್ಲಿರುವ ತಂದೆ ಬಿ.ಕೆ ಶಿವರಾಂ ಅವರ ನಿವಾಸದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರಿಗೆ ಸ್ಪಂದನಾ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ನಂತರ ಇಂದು ಸಂಜೆ 4 ಗಂಟೆಗೆ ಶ್ರೀರಾಮಪುರದ ಹರಿಶ್ಚಂದ್ರಘಾಟ್ನಲ್ಲಿ ಸ್ಪಂದನಾ ಅಂತ್ಯಕ್ರಿಯೆ ನೇರವೇರಲಿದೆ. ಈಗಾಗಲೇ ಬೆಂಗಳೂರಿನ ಶ್ರೀರಾಂಪುರಂದ ಹರಿಶ್ಚಂದ್ರ ಘಾಟ್ನಲ್ಲಿ ನಡೆಯಲಿರುವ ಅಂತ್ಯ ಸಂಸ್ಕಾರ ಹಿನ್ನೆಲೆಯಲ್ಲಿ ಹರಿಶ್ಚಂದ್ರ ಘಾಟ್ನಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಸ್ವಚ್ಚತ ಕಾರ್ಮಿಕರು ಎಲ್ಲಾ ತಯಾರಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸ್ಪಂದನಾ ವಿಜಯ ರಾಘವೇಂದ್ರ ಕುಟುಂಬದ ಮೂಲಗಳಿಂದ ಮಾಹಿತಿ ನೀಡಲಾಗಿದ್ದು, ಮಂಗಳವಾರ ರಾತ್ರಿ ಥೈಲ್ಯಾಂಡ್ ನಲ್ಲಿ ಕಾನೂನು ಪ್ರಕ್ರಿಯೆಗಳನ್ನೆಲ್ಲ ಪೂರೈಸಿ, ಥೈಲ್ಯಾಂಡ್ ಏರ್ ಲೈನ್ಸ್ ನ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಸ್ಪಂದನಾ ಮೃತದೇಹವನ್ನು ತರಲಾಗಿದೆ.