ಕೊಪ್ಪಳ : ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ 2023-24ನೇ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳಾದ ಹೊಸದಾಗಿ ಮೀನುಕೃಷಿ ನಿರ್ಮಾಣಕ್ಕೆ ಸಹಾಯಧನ, ಹೂಡಿಕೆ ವೆಚ್ಛಗಳಿಗೆ ಸಹಾಯಧನ, ಸಿಹಿನೀರು ಬಯೋಫ್ಲಾಕ್ ಘಟಕ ಸ್ಥಾಪನೆಗೆ ಸಹಾಯಧನ, ಶಾಖನಿರೋಧಕ ವಾಹನ ಖರೀದಿಗೆ ಸಹಾಯಧನ ಮತ್ತು ಯಾಂತ್ರೀಕೃತ ದೋಣಿಗಳಿಗೆ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪ.ಜಾತಿ, ಪ.ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ.
ಆಸಕ್ತ ಕೊಪ್ಪಳ ತಾಲೂಕಿನ ಮೀನುಗಾರರು ಮತ್ತು ಸಾರ್ವಜನಿಕರು ಆಗಸ್ಟ್ 21ರೊಳಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಕೊಪ್ಪಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಸಂಪರ್ಕಿಸಬಹುದು ಎಂದು ಕೊಪ್ಪಳ ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.