ಕೊಪ್ಪಳ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಭಾಗವಹಿಸಲು ಗೂಗಲ್ ಅರ್ಜಿ ಸಲ್ಲಿಸಬಹುದಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸAಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು, ಆಡಿಯೋ-ವೀಡಿಯೋ ಎಡಿಟಿಂಗ್ ತರಬೇತಿ ಕಾರ್ಯಾಗಾರವನ್ನು 2023ರ ಆಗಸ್ಟ್ 29ರಿಂದ ಸೆಪ್ಟೆಂಬರ್ 02ರವರೆಗೆ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರು ಸಂಶೋಧನಾ ವಿದ್ಯಾರ್ಥಿಗಳಿಗೆ ಆಯೋಜಿಸಿದೆ. ಈ ಕಾರ್ಯಾಗಾರವನ್ನು ಬೆಂಗಳೂರಿನ ಕೆ.ಎಸ್.ಟಿ ಅಕಾಡೆಮಿ ಕಚೇರಿಯಲ್ಲಿ (ಯು.ಆರ್.ರಾವ್ ವಿಜ್ಞಾನ ಭವನ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಮಹಾದ್ವಾರ, ಜಿ.ಕೆ.ವಿ.ಕೆ. ಆವರಣ, ದೊಡ್ಡಬೆಟ್ಟಹಳ್ಳಿ ಬಸ್ ನಿಲ್ದಾಣ, ವಿದ್ಯಾರಣ್ಯಪುರ, ಬೆಂಗಳೂರು-560097) ಏರ್ಪಡಿಸಲಾಗುತ್ತಿದೆ.
ಆಸಕ್ತರು https://forms.gle/2qH2JmtMfCBFq7zv5 ನಲ್ಲಿ ಗೂಗಲ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಹೆಚ್ಚಿನ ವಿವರಗಳನ್ನು ಅಕಾಡೆಮಿಯ ವೆಬ್‌ಸೈಟ್ kstacademy.in ನಲ್ಲಿ ಮತ್ತು ಅಕಾಡೆಮಿಯ ದೂರವಾಣಿ 080-29721550 ಮೂಲಕ ಪಡೆಯಬಹುದಾಗಿದೆ ಎಂದು ಕೆ.ಎಸ್.ಟಿ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ ಎ.ಎಂ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.