BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಸರ್ಕಾರ..!

You are currently viewing BREAKING : ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಸರ್ಕಾರ..!

ಬೆಂಗಳೂರು : ನಗರ ಪ್ರದೇಶಗಳಲ್ಲಿನ ಜನರಿಗೆ ಉತ್ತಮ ಆರೋಗ್ಯದ ಸೌಲಭ್ಯ ನೀಡುವಸಲುವಾಗಿ ಜಾರಿಗೆ ಮಾಡಿರುವ “ನಮ್ಮ ಕ್ಲಿನಿಕ್” ಯೋಜನೆಯನ್ನು ಮತೀಷ್ಟು ಸಮಯ ವಿಸ್ತರಣೆ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಬಂದಿದೆ. “ನಮ್ಮ ಕ್ಲಿನಿಕ್” ಗಳನ್ನು ರಾತ್ರಿ 8 ಗಂಟೆಯವರೆಗೆ ಓಪನ್ ಮಾಡಲು ಆರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಮೂಲಕ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದೆ.

“ನಮ್ಮ ಕ್ಲಿನಿಕ್” ಗಳನ್ನು ದಿನ ನಿತ್ಯ ಬೆಳಗ್ಗೆ 9 ರಿಂದ ಮಧ್ಯಾಹ್ನ 12.30ರವರೆಗೆ, ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30ರವರೆಗೆ ಮಾತ್ರ ತೆರೆದು ಈವರೆಗೆ ಬಡ ರೋಗಿಗಳಿಗೆ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಈಗ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ನಮ್ಮ ಕ್ಲಿನಿಕ್ ತೆರೆಯೋದಕ್ಕೆ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.

ಈಗಾಗಲೇ ರಾಜ್ಯದಲ್ಲಿ 415 ನಮ್ಮ ಕ್ಲಿನಿಕ್ ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಕ್ಲಿನಿಕ್‌ಗಳಲ್ಲಿ ಈವರೆಗೆ 96 ಸಾವಿರಕ್ಕೂ ಹೆಚ್ಚು ಮಹಿಳೆಯರು, 4.21 ಲಕ್ಷಕ್ಕೂ ಅಧಿಕ ಪುರುಷರು ಸೇರಿದಂತೆ 5 ಲಕ್ಷಕ್ಕೂ ಹೆಚ್ಚು ಮಂದಿ ಸೇವೆ ಪಡೆದುಕೊಂಡಿದ್ದಾರೆ. ನಿತ್ಯ ಸರಾಸರಿ 35 ರಿಂದ 40 ಮಂದಿ ನಮ್ಮ ಕ್ಲಿನಿಕ್ ಗಳಿಗೆ ಭೇಟಿ ನೀಡಿ, ಆರೋಗ್ಯ ಸಂಬಂಧಿ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಇದೆ.

Leave a Reply

error: Content is protected !!