ಕೊಪ್ಪಳ : ಕುಕನೂರು ಜವಾಹರ ನವೋದಯ ವಿದ್ಯಾಲಯದ 2024-25 ಸಾಲಿನಲ್ಲಿ 6ನೇ ತರಗತಿಯ ಆಯ್ಕೆಗಾಗಿ ಪ್ರವೇಶ ಪರೀಕ್ಷೆಯ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಅರ್ಹ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ನವೋದಯ ವಿದ್ಯಾಲಯ ಸಮಿತಿಯ ಜಾಲತಾಣ www.navodaya.gov.in ಮುಖಾಂತರ ಸಲ್ಲಿಸಬೇಕು ಎಂದು ಕುಕನೂರು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರಾದ ಜಯಾ ಜೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.