ಕೊಪ್ಪಳ, ಆಗಸ್ಟ್ 15 : ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಜಿಲ್ಲಾ ಪೊಲೀಸ್ ಅಧಿಕಾರಿಗಳು, ‘ಸಿಬ್ಬಂದಿಯು ಸಮಾರಂಭದಲ್ಲಿ ನೆರೆದಿದ್ದ ಗಣ್ಯರು ಹಾಗೂ ಮಕ್ಕಳಿಗೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಡಿವೈಎಸ್ಪಿ ಶರಣಬಸಪ್ಪ ಸುಬೇದಾರ, ಡಿಎಆರ್ ಡಿವೈಎಸ್ಪಿ ನಿಂಗಪ್ಪ ಎನ್., ಪ್ರೊಬೇಷನರಿ ಡಿಎಸ್ಪಿ ರವಿಕುಮಾರ್, ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಸಂತೋಷ ಹಳ್ಳೂರು, ಗ್ರಾಮೀಣ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಮಹಾಂತೇಶ ಸಜ್ಜನ, ಆರ್.ಪಿ.ಐ ಮಹಾಂತೇಶ ಸೇರಿದಂತೆ ಇನ್ನೀತರ ಪೊಲೀಸ್ ಅಧಿಕಾರಿಗಳು, ನಿವೃತ್ತ ಪೊಲೀಸ್ ಅಧಿಕಾರಿಗಳು ಹಾಗೂ ಮತ್ತಿತರರು ಇದ್ದರು.