ಕೊಪ್ಪಳ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿನ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರು ಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಆಸಕ್ತ ಕ್ರೀಡಾಪಟುಗಳು ನಿಗಧಿತ ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ಮಳೇ ಮಲ್ಲೇಶ್ವರ ರಸ್ತೆ ಕೊಪ್ಪಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಸೆಪ್ಟೆಂಬರ್ 25 ರೊಳಗಾಗಿ ಈ ಕಚೇರಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಗೆ ಭೇಟಿ ಮಾಡಿ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ರೀಡಾಪಟುಗಳಿಗೆ ಸಿಹಿ ಸುದ್ದಿ..!
