ಭಾರತ ಕ್ರಿಕೆಟ್ ತಂಡದ ಯುವ ಬ್ರಿಗೇಡ್ ಇದೀಗ ಐರ್ಲೆಂಡ್ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲು ಸಜ್ಜಾಗಿದೆ. ಗಾಯ ಕಾರಣಕ್ಕೆ ಸುದೀರ್ಘ ವಿಶ್ರಾಂತ ಪಡೆದ ಬಳಿಕ ಮರಳಿದ ಜಸ್ಪ್ರೀತ್ ಬುಮ್ರಾಗೆ ನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದ್ದು, ಯುವ ಕ್ರಿಕೆಟಿಗ ರುತುರಾಜ್ ಗಾಯಕ್ವಾಡ್ ಉಪನಾಯಕರಾಗಿ ನೇಮಕಗೊಂಡಿದ್ದಾರೆ. ಈ ಸರಣಿಯಲ್ಲಿ ಹಲವು ಯುವ ಆಟಗಾರರಿಗೆ ಬಿಸಿಸಿಐ ಅವಕಾಶ ನೀಡಿದೆ.
ಮೂರು ಪಂದ್ಯಗಳ ಸರಣಿ ನಾಳೆಯಿಂದ (18 ರಿಂದ) ಆರಂಭವಾಗಲಿದೆ. ಅಂತಿಮ ಪಂದ್ಯ ಆಗಸ್ಟ್ 23 ರಂದು ನಡೆಯಲಿದೆ. ಎಲ್ಲಾ ಮೂರು ಪಂದ್ಯಗಳು ಡಬ್ಲಿನ್‌ನ ದಿ ವಿಲೇಜ್ ಮೈದಾನದಲ್ಲಿ ನಡೆಯಲ್ಲಿದ್ದು, ವೇಳಾಪಟ್ಟಿಯ ಪ್ರಕಾರ ಮೊದಲ ಟಿ20 ಪಂದ್ಯ ಇದೇ ಶುಕ್ರವಾರ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪಂದ್ಯ ಆರಂಭವಾಗಲಿದೆ.
ಉಭಯ ತಂಡಗಳ ಆಟಗಾರರ ಪಟ್ಟಿ ಹೀಗಿದೆ.
ಟೀಂ ಇಂಡಿಯಾದ : ಜಸ್ಪ್ರೀತ್ ಬುಮ್ರಾ (ನಾಯಕ), ರುತುರಾಜ್ ಗಾಯಕ್ವಾಡ್ (ಉಪನಾಯಕ), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್ , ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವಿ ಬಿಷ್ಣೋಯ್, ಅರ್ಶ್ದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್.
ಐರ್ಲೆಂಡ್ : ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ರಾಸ್ ಅಡೈರ್, ಹ್ಯಾರಿ ಟೆಕ್ಟರ್, ಗರೆಥ್ ಡೆಲಾನಿ, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಲೋರ್ಕನ್ ಟಕರ್, ಮಾರ್ಕ್ ಅಡೈರ್, ಜೋಶುವಾ ಲಿಟಲ್, ಬ್ಯಾರಿ ಮೆಕಾರ್ಥಿ, ಥಿಯೋ ವ್ಯಾನ್‌ಕೋಮ್, ಬೆಂಜಮಿನ್ ವೈಟ್, ಕ್ರೇಗ್ ಯಂಗ್.
ವರದಿ : ಚಂದ್ರು ಆರ್ ಭಾನಾಪೂರ್