ಸರ್ಕಾರಿ ಅಭಿಯೋಜಕರ, ವಕೀಲ ಹುದ್ದೆಗಳ ತಾತ್ಕಾಲಿಕ ಭರ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ : ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಗಂಗಾವತಿ, ಕುಷ್ಟಗಿ, ಯಲಬುರ್ಗಾ ಹಾಗೂ ಕೊಪ್ಪಳ ಅಪರ ಜೆಎಂಎಫ್ ನ್ಯಾಯಾಲಯದಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ 07 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಅರ್ಜಿ ಸಲ್ಲಿಸಲು ಇದೇ ಆಗಸ್ಟ್ 20ಕೊನೆಯ ದಿನವಾಗಿದ್ದು, ಅರ್ಹ ವಕೀಲರು ತಮ್ಮ ಎಸ್.ಎಸ್.ಎಲ್.ಸಿ., ತತ್ಸಮಾನ ಅಂಕಪಟ್ಟಿ ಪ್ರತಿ, ಎಲ್.ಎಲ್.ಬಿ ಪದವಿಯ ಪ್ರತಿ ವರ್ಷದ, ಸೆಮೆಸ್ಟರ್‌ನ ಅಂಕಪಟ್ಟಿಗಳ ಪ್ರತಿಗಳು, ವಕೀಲರಾಗಿ ನೋಂದಣಿ ಆದ ಬಾರ್ ಕೌನ್ಸಿಲ್ ರವರು ನೀಡಿದ ಸನ್ನದಿನ ಪ್ರತಿ, ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ವಕೀಲರ ಸಂಘದಿಂದ ಪಡೆದ ಪ್ರಮಾಣ ಪತ್ರದ ಪ್ರತಿ, ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ನ್ಯಾಯಾಲಯದ ಪೀಠಾಸೀನ ಅಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರದ ಪ್ರತಿ, ಗುತ್ತಿಗೆ ಆಧಾರದಲ್ಲಿ ಆಯ್ಕೆಯಾದಲ್ಲಿ ಜಿಲ್ಲೆಯ ಇತರೆ ತಾಲೂಕುಗಳಲ್ಲಿ ಅಥವಾ ಪಕ್ಕದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವುದಾಗಿ ನೀಡಿದ ಒಪ್ಪಿಗೆ ಪತ್ರ, ಮೀಸಲಾತಿಗೆ ಸಂಬಂಧಿಸಿದ ಜಾತಿ/ ಪ್ರವರ್ಗಕ್ಕೆ ಸೇರಿದ ಬಗ್ಗೆ ಸಂಬಂಧಪಟ್ಟ ಪ್ರಾಧಿಕಾರವು ನೀಡಿದ ಜಾತಿ/ ಆದಾಯ ಪ್ರಮಾಣ ಪತ್ರದ ಪ್ರತಿ, ಈಗಾಗಲೇ ಗುತ್ತಿಗೆ ಆಧಾರದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ನೇಮಕವಾಗಿದ್ದಲ್ಲಿ ನೇಮಕಾತಿ ಪತ್ರದ ಪ್ರತಿ, ಈಗಾಗಲೇ ಗುತ್ತಿಗೆ ಆಧಾರದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ನೇಮಕಗೊಂಡು ನೇಮಕಾತಿ ಆದೇಶ ರದ್ದಾಗಿದ್ದಲ್ಲಿ ಅಥವಾ ರಾಜೀನಾಮೆ ಸಲ್ಲಿಸಿದ್ದಲ್ಲಿ ಈ ಬಗ್ಗೆ ಅಗತ್ಯ ದಾಖಲಾತಿಗಳನ್ನು ಅರ್ಜಿಯೊಂದಿಗೆ ಲಗತ್ತಿಸಿ, ಸರ್ಕಾರಿ ಅಭಿಯೋಜಕರ ಕಚೇರಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆವರಣ, ಕೊಪ್ಪಳ ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ಕುರಿತಂತೆ ಅರ್ಹತೆ, ನೇಮಕಾತಿ ವಿಧಾನ ಹಾಗೂ ಇತರ ಮಾಹಿತಿಗಾಗಿ ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿ ಎಂದು ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳ ನೇಮಕಾತಿ ಸದಸ್ಯ ಕಾರ್ಯದರ್ಶಿಗಳಾದ ಪ್ರಧಾನ ಸರ್ಕಾರಿ ಅಭಿಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.