ಬೆಂಗಳೂರು : ಇದೇ ತಿಂಗಳ ಆಗಸ್ಟ್ 31ರ ಒಳಗೆ ರಾಜ್ಯ ಸರ್ಕಾರ ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡದೆ ಹೋದಲ್ಲಿ ಕಾಮಗಾರಿಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಎಚ್ಚರಿಕೆ ನೀಡಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಂಪಣ್ಣ, ‘25,000 ಕೋಟಿಗೂ ಹೆಚ್ಚು ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ತಿಳಿಸಿದ್ದಾರೆ. 7 ಕ್ಕೂ ಹೆಚ್ಚು ಇಲಾಖೆಗಳಿಂದ ಸಾವಿರಾರು ಕೋಟಿ ರೂ ಬಿಲ್ ಬಾಕಿ ಇದ್ದು, ಆಗಸ್ಟ್ 31ರೊಳಗೆ ಸರ್ಕಾರ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ. ಈ ಬಗ್ಗೆ ಸಭೆ ನಡೆಸಲಾಗುತ್ತದೆ. 61 ವಿವಿಧ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ’ ಎಂದು ಅವರು ತಿಳಿಸಿದರು.
ಈಗಾಗಲೇ ಬಾಕಿ ಉಳಿದಿರುವ ಮೊತ್ತವನ್ನು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದ್ದು, ಇದಕ್ಕೆ ಸಂಬಂಧ ಪಟ್ಟ ಇಲಾಖೆ ಸಚಿವರಿಗೂ ಮನವಿ ಮಾಡಿದ್ದರು ಪ್ರಯೋಜನವಾಗಲಿಲ್ಲ. ಕಳೆದ 3 ವರ್ಷಗಳಿಂದ ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರರು ಒತ್ತಾಯ ಮಾಡುತ್ತಿದ್ದಾರೆ ಎಂದು ಹೇಳಿದರು.