ವಸತಿ ನಿಲಯಗಳಿಗೆ ಬೇಕಾಗಿದೆ ಬಾಡಿಗೆ ಕಟ್ಟಡ

You are currently viewing ವಸತಿ ನಿಲಯಗಳಿಗೆ ಬೇಕಾಗಿದೆ ಬಾಡಿಗೆ ಕಟ್ಟಡ

ಕೊಪ್ಪಳ : ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಬಾಡಿಗೆ ಕಟ್ಟಡ ಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್-1 ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಕೊಪ್ಪಳ ತಾಲೂಕು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿ ನಿಲಯಗಳಲ್ಲಿ ಮಂಜೂರಾತಿ ಸಂಖ್ಯೆಗಿಂತ ಹೆಚ್ಚುವರಿ ವಿದ್ಯಾರ್ಥಿಗಳು ಪ್ರವೇಶ ಪಡೆದಿರುವುದರಿಂದ ಕೊಪ್ಪಳದ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕೀಯರ ವಸತಿ ನಿಲಯ, ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ (ಪ.ವರ್ಗ), ಸರ್ಕಾರಿ ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯ (ಪ.ವರ್ಗ), ಸರ್ಕಾರಿ ಮೆಟ್ರಿಕ್ ನಂತರದ ಬಾಲಕೀಯರ ವಸತಿ ನಿಲಯ ಕೊಪ್ಪಳ (ಪ.ಜಾತಿ-1), ಈ ನಾಲ್ಕು ವಸತಿ ನಿಲಯಗಳಿಗೆ ಕೊಪ್ಪಳದಲ್ಲಿ ಬಾಡಿಗೆ ಕಟ್ಟಡಗಳ ಅವಶ್ಯಕತೆ ಇದ್ದು, ಆಸಕ್ತ ಬಾಡಿಗೆ ಕಟ್ಟಡದ ಮಾಲೀಕರು ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಕೊಪ್ಪಳ ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Leave a Reply

error: Content is protected !!