ಬೆಂಗಳೂರು : ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಈಗಾಗಲೇ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳವ ಪ್ರಕ್ರಿಯೆ ನಡೆಸಲಾಗುತ್ತಿದ್ದು, ಈ ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಈ ಹುದ್ದೆಗೆ ನೇಮಕವಾದಗೆ ಅಭ್ಯರ್ಥಿಗೆ ತಿಂಗಳಿಗೆ 32,000 ರೂ.ಗಳವರೆಗೆ ವೇತನ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಕಾಲೇಜು ಶಿಕ್ಷಣ ಇಲಾಖೆಯಿಂದ ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. (2023-24) ಈ ವರ್ಷದ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ, ಉಳಿಕೆಯಾಗಿರುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ಆನ್ ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಇದೀಗ ಅತಿಥಿ ಉಪನ್ಯಾಸಕರ ಹುದ್ದೆಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಯು ಇಂದಿನಿಂದ (ಆಗಸ್ಟ್ 25) ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸೋದಕ್ಕೆ ಸೆಪ್ಟೆಂಬರ್ 2 ಕೊನೆ ದಿನ ಆಗಿದೆ. ರಾಜ್ಯವ್ಯಾಪಿ ಮೆರಿಟ್ ಪಟ್ಟಿಯನ್ನು ಸೆಪ್ಟೆಂಬರ್ 04ರಂದು ಪ್ರಕಟಿಸಲಾಗುತ್ತದೆ. ತಾತ್ಕಾಲಿಕ ಕಾರ್ಯಭಾರ ಹಾಗೂ ಕೌನ್ಸೆಲಿಂಗ್ ಗಾಗಿ ಅಭ್ಯರ್ಥಿಗಳ ಪಟ್ಟಿಯನ್ನು ಸೆಪ್ಟೆಂಬರ್ 08ರಂದು ಪ್ರಕಟಿಸಲಾಗುತ್ತಿದೆ ಎಂದು ತಿಳಿಸಿದೆ.
ಮೆರಿಟ್ ಪಟ್ಟಿಯನ್ವಯ ಕಾಲೇಜುಗಳ ಆಯ್ಕೆ ಕೌನ್ಸಿಲಿಂಗ್ ಅನ್ನು ಸೆಪ್ಟೆಂಬರ್ 11 ರಿಂದ 15ರವರೆಗೆ ನಡೆಸಲಾಗುತ್ತದೆ. ಕೌನ್ಸಿಲಿಂಗ್ ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿಯನ್ನು ಸೆಪ್ಟೆಂಬರ್ 16ರಂದು ಪ್ರಕಟಿಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಅಧಿಕೃತ ಜಾಲತಾಣ #www.dce.karnataka.gov.in ಗೆ ಭೇಟಿ ನೀಡಿ ಎಂದು ತಿಳಿಸಿದೆ.