ಬೆಂಗಳೂರು : ಚಂದ್ರಯಾನ-3 ಯಶಸ್ಸಿಗೊಂಡ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸೋದಕ್ಕೆ ಇಂದು ಬೆಂಗಳೂರಿಗೆ ಪ್ರಧಾನಿ ಮೋದ ಬಂದು, ವಾಪಾಸ್ಸಾಗಿದ್ದಾರೆ. ಇದೇ ವೇಳೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಶಾಸಕರು, ಮಾಜಿ ಸಚಿವರನ್ನು ಬ್ಯಾರಿಕೇಟ್ ಹಿಂದಿನಿಂದ ಪ್ರಧಾನಿ ಮೋದಿಗೆ ಕೈ ಬೀಸುತ್ತಿರುವಂತ ಪೋಟೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ಈ ಪೋಟೋಗೆ ಕ್ಯಾಪ್ಷನ್ ಕೂಡ ಕೊಟ್ಟಿದ್ದು, ಬಿಜೆಪಿ ನಾಯಕರೇ ಬೇಲಿಯ ಒಳಗೆ.. ಪ್ರಧಾನಿ ಜನಸಾಮಾನ್ಯರಿಗೆ ಸಿಗುವರೇ ಎಂಬುದಾಗಿ ಟೀಕಿಸಲಾಗಿದೆ.
ಇದಕ್ಕೆ ರಾಜ್ಯ ಕಾಂಗ್ರೆಸ್ ಕೂಡ ಬಿಜೆಪಿಯನ್ನು ಹಿಗ್ಗಾಮುಗ್ಗ ಟೀಕಿಸಿದ್ದು, “ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ!, ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ!. ಇದೀಗ ಬಿಜೆಪಿಯವರು ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಕಾಂಗ್ರೆಸ್ ಟ್ವೀಟರ್‌ನಲ್ಲಿ ಬೆರದುಕೊಂಡಿದೆ.