ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ : ಹೈಕೋರ್ಟ್ ಆದೇಶ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹ : ಹೈಕೋರ್ಟ್ ಆದೇಶ

ಚುನಾವಣೆ ಆಯೋಗಕ್ಕೆ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಇಂದು ಆದೇಶ ನೀಡಿದೆ.

2019 ರಲ್ಲಿ ನಡೆದ ಲೋಕಸಭಾ ಚುನಾವಣೆಯ ವೇಳೆಯಲ್ಲಿ ಹಾಸನದಿಂದ ಸ್ಪರ್ದಿಸಿ ಜಯಗಳಿಸಿದ್ದ ಜೆಡಿಎಸ್ ಪಕ್ಷದ ಸಂಸತ್ ಸದಸ್ಯ ಪ್ರಜ್ವಲ್ ರೇವಣ್ಣ ಅವರು ಆ ಸಮಯದಲ್ಲಿ ಚುನಾವಣೆ ನಾಮಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಅವರ ಸಂಸತ್ ಸ್ಥಾನವನ್ನು ಅನರ್ಹ ಗೊಳಿಸಿ ಎಂದು ಕಾಂಗ್ರೆಸ್ ಪಕ್ಷದಿಂದ ಸ್ಪರ್ದಿಸಿದ್ದ ಅಭ್ಯರ್ಥಿ ಎ ಮಂಜು ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಇದೆಲ್ಲವನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಸದಸ್ಯತ್ವ ವನ್ನು ಅಮಾನ್ಯಗೊಳಿಸಿದೆ. ಸದ್ಯ ಪ್ರಜ್ವಲ್ ಅವರ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಗೆ ದೂರು ನೀಡಿದ್ದ ಎ ಮಂಜು ಅವರು ಈಗ ಜೆಡಿಎಸ್ ಪಕ್ಷದ ಶಾಸಕರಾಗಿದ್ದಾರೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೆಲ್ಮನವಿ ಸಲ್ಲಿಸುವ ಅವಕಾಶವಿದ್ದು ಮೆಲ್ಮನವಿ ಸಲ್ಲಿಸುವುದಾಗಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

Leave a Reply

error: Content is protected !!